BIG NEWS: ರಾಜ್ಯದ ಎಲ್ಲಾ ವಿವಿಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿ

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿಗೆ ತಜ್ಞರ ಸಮಿತಿ ಶಿಫಾರಸು ಮಾಡಿದ್ದು, ಇದನ್ನು ಜಾರಿಗೆ ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಶಿಕ್ಷಣ, ಪಠ್ಯಕ್ರಮ, ಪರೀಕ್ಷಾ ಪದ್ಧತಿ ಜಾರಿ ಕುರಿತಾಗಿ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ವಿವಿಗಳಲ್ಲಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕ ನೀಡುತ್ತಿದ್ದು, ಈ ಪದ್ಧತಿಯನ್ನು ಇನ್ನಷ್ಟು ಸರಳೀಕರಣ ಮಾಡಲಾಗುವುದು. ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ರಚಿಸಲಾದ ಸಮಿತಿ ನೀಡುವ ಶಿಫಾರಸು ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ವಿವಿ ಕುಲಪತಿಗಳೊಂದಿಗೆ ಸಭೆ ನಡೆಸಿ ಅಭಿಪ್ರಾಯ ಪಡೆಯಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read