BIG NEWS : ರಾಜ್ಯದಲ್ಲಿ `ವಕ್ಫ್’ ಗೊಂದಲ ನಿವಾರಣೆಗೆ ಸಮಿತಿ ರಚನೆ : ರೈತರ ತೆರವುಗೊಳಿಸದೇ ಖಾತೆ ಮಾಡಿಕೊಡುವುದಾಗಿ `CM ಸಿದ್ದರಾಮಯ್ಯ’ ಘೋಷಣೆ.!

ಬೆಳಗಾವಿ: ವಕ್ಫ್ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.

ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್ ಮಂಡಳಿ ಆಸ್ತಿ ಕುರಿತು ಎದ್ದಿರುವ ವಿವಾದ ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ದೇವಸ್ಥಾನ, ಹಿಂದೂ ರುದ್ರ ಭೂಮಿಗಳ ಕುರಿತು ಪರಿಶೀಲಿಸಿ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೇ ಇನಾಂ ರದ್ದತಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಯಡಿ ರೈತರಿಗೆ ಮಂಜೂರಾದ ಭೂಮಿ ಇದ್ದರೆ, ದೇವಾಲಯ, ರುದ್ರ ಭೂಮಿ, ಸರ್ಕಾರಿ ಶಾಲೆಗಳು ವಕ್ಪ್ ಆಸ್ತಿಯಲ್ಲಿದ್ದರೆ ಅದನ್ನು ತೆರವು ಮಾಡದೆ ಪಹಣಿಯಲ್ಲಿ ನಮೂದಾಗಿರುವ ವಕ್ಫ್ ಅನ್ನು ತೆಗೆದು ಖಾತೆ ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.

ಮಸೀದಿ, ಮದರಸಾ, ದರ್ಗಾ, ಈದ್ಗಾ ಮೈದಾನ, ಖಬರಸ್ಥಾನದ ಭೂಮಿಗಳನ್ನು ಮಾತ್ರ ವಕ್ಪ್ ಗೆ ಸೇರ್ಪಡೆ ಮಾಡಲಾಗುವುದು. ಸರ್ಕಾರ ನಿರ್ಧರಿಸಿದ ಅಂಶಗಳನ್ನು ಹೊರತುಪಡಿಸಿ ಉಳಿದ ಅಕ್ರಮ ಒತ್ತುವರಿ ತೆರವು ಮಾಡಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read