HomeLatest Newsಭೂ ಕಂದಾಯ 2ನೇ ತಿದ್ದುಪಡಿ ವಿಧೇಯಕ ಸಮಗ್ರ ಪರಿಶೀಲನೆಗೆ ಕೃಷ್ಣ ಬೈರೇಗೌಡ ನೇತೃತ್ವದ ಸಮಿತಿ ರಚನೆ

ಭೂ ಕಂದಾಯ 2ನೇ ತಿದ್ದುಪಡಿ ವಿಧೇಯಕ ಸಮಗ್ರ ಪರಿಶೀಲನೆಗೆ ಕೃಷ್ಣ ಬೈರೇಗೌಡ ನೇತೃತ್ವದ ಸಮಿತಿ ರಚನೆ

ಬೆಂಗಳೂರು: ಭೂಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಸಮಗ್ರ ಪರಿಶೀಲನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ 2025 ಅನ್ನು ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಸದಸ್ಯರ ಕೋರಿಕೆ ಮೇರೆಗೆ ಸಮಗ್ರ ಪರಿಶೀಲನೆಗೆ ಪರಿಶೀಲನಾ ಸಮಿತಿ ರಚಿಸಿ ವರದಿ ನೀಡಲು ಸೂಚಿಸಲಾಗಿದೆ.

ಸದನದ ನಿರ್ಣಯದಂತೆ ವಿಧೇಯಕ ಪರಿಶೀಲಿಸಿ ವರದಿ ನೀಡಲು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರು ಕೃಷ್ಣಬೈರೇಗೌಡ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಹಾಗೂ ವಿಧಾನಸಭೆ ಸದಸ್ಯರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ, ಹೆಚ್.ವಿ. ವೆಂಕಟೇಶ್, ಡಾ. ಶ್ರೀನಿವಾಸ್ ಎನ್.ಟಿ., ಗಣೇಶ್, ಪ್ರಕಾಶ್ ಹುಕ್ಕೇರಿ, ಭೀಮಣ್ಣ ನಾಯ್ಕ, ಅರವಿಂದ ಬೆಲ್ಲದ, ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಮತ್ತು ಎಂ.ಟಿ. ಕೃಷ್ಣಪ್ಪ ಅವರನ್ನು ಸದಸ್ಯರನ್ನಾಗಿ ನೇಮಿಸಿ ಸಮಿತಿ ರಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಮಿತಿಗೆ ವರದಿ ನೀಡಲು ಮೂರು ತಿಂಗಳ ಕಾಲಾವಧಿ ನಿಗದಿಪಡಿಸಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular