HomeKarnatakaಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆ.26ರಂದು ಬೆಳಿಗ್ಗೆ 10.30 ರಿಂದ 3 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ 3ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

ಅಭ್ಯರ್ಥಿಗಳು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ರಸ್ತೆ, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular