HomeKarnatakaಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ: ಐವರು ಮಹಿಳೆಯರಿಗೆ ಖಾಸಗಿ ಕಂಪನಿ ಮಾಲೀಕನಿಂದ ವಂಚನೆ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ: ಐವರು ಮಹಿಳೆಯರಿಗೆ ಖಾಸಗಿ ಕಂಪನಿ ಮಾಲೀಕನಿಂದ ವಂಚನೆ

ಬೆಂಗಳೂರು: ಮಹಿಳೆಯರಿಗೆ ಕೆಲಸದ ಆಮಿಷವೊಡ್ಡಿ, ತನ್ನದೇ ಕಂಪನಿಯಲ್ಲಿ ಕೆಲಸಕ್ಕೆ ಸೇರಿಸಿಕೊಂಡು, ಮದುವೆಯಾಗುವುದಾಗಿ ನಂಬಿಸಿ ಐವರು ಮಹಿಳೆಯರಿಗೆ ಕಂಪನಿಯ ಮಾಲೀಕನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ನಗರದ ಸೂರ್ಯ ಮ್ಯಾನೇಜ್ಮೆಂಟ್ ಸರ್ವಿಸ್ ಸಂಸ್ಥೆಯ ಮಾಲೀಕ ರಾಮಾಂಜಿ ಎಂಬಾತ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಇತರ ಮಹಿಳೆಯರಿಗೆ ಮದುವೆಯಾಗುವ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಆರೋಪ ಕೇಳಿಬಂದಿದೆ.

38 ವರ್ಷದ ರಾಮಾಂಜಿ ಇದೇ ರೀತಿ ಐವರು ಹೆಣ್ಣುಮಕ್ಕಳಿಗೆ ಮೋಸ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ನಾಪತ್ತೆಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿ ಕಳೆದುಕೊಂಡವರು, ವಿಚ್ಛೇದಿತ ಮಹಿಳೆಯರು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಯುವತಿಯರೇ ಈತನ ಟಾರ್ಗೆಟ್. ಹೀಗೆ ಸಂಕಷ್ಟದಲ್ಲಿರುವ ಮಹಿಳೆಯರಿಗೆ ತನ್ನ ಕಂಪನಿಯಲ್ಲಿ ಕೆಲಸಕ್ಕೆ ಸೇರಿಸಿಕೊಂಡು ಬಳಿಕ ಬಲೆಗೆ ಕೆಡವುತ್ತಿದ್ದ ಎನ್ನಲಾಗಿದೆ.

ನೊಂದ ಮಹಿಳೆಯರಿಗೆ ಮದುವೆಯ ಭರವಸೆ ನೀಡಿ ಅವರ ಕುಟುಂಬದವರ ಪರಿಚಯವನ್ನೂ ಮಾಡಿಕೊಳ್ಳುತ್ತಿದ್ದ. ಬಳಿಕ ದೈಹಿಕ ಸಂಪರ್ಕ ಬೆಳೆಸಿ, ನಂತರ ಹಣ ಮತ್ತು ಚಿನ್ನಾಭರಣಗಳನ್ನು ಪಡೆದು ಮೋಸ ಮಾಡಿ ಎಸ್ಕೇಪ್ ಆಗುತ್ತಿದ್ದ. ಆರೋಪಿ ಈತ ಹೌಸ್ ಕೀಪಿಂಗ್ ಮತ್ತು ಸೆಕ್ಯೂರಿಟಿ ಸೇವೆಗಳನ್ನು ಒದಗಿಸುತ್ತಿದ್ದ ಸಂಸ್ಥೆಯ ಮುಖ್ಯಸ್ಥನಾಗಿದ್ದು, 60ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದಾನೆ. ಈತನಿಂದ ಮೋಸಹೋದ ಸಂತ್ರಸ್ತೆಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಆರೋಪಿಯನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular