HomeUncategorizedಬೆಂಗಳೂರಿನಲ್ಲಿ ಘೋರ ಘಟನೆ: 15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಸಂಸ್ಥೆ: ಅಪಾರ್ಟ್ ಮೆಂಟ್ ನ...

ಬೆಂಗಳೂರಿನಲ್ಲಿ ಘೋರ ಘಟನೆ: 15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಸಂಸ್ಥೆ: ಅಪಾರ್ಟ್ ಮೆಂಟ್ ನ 7ನೇ ಮಹಡಿಯಿಂದ ಬಿದ್ದು ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸ್ಥಳೀಯ ಕಂಪನಿಯೊಂದು ಪ್ರಮಾದವೆಸಗಿದ್ದು, ಅಪ್ರಾಪ್ತ ಬಾಲಕರಿಗೆ ಮದ್ಯ ಕುಡಿಸಿ ಆತನ ಸಾವಿಗೆ ಕಾರಣವಗಿದೆ.

15 ವರ್ಷದ ಅಪ್ರಾಪ್ತನೊಬ್ಬ ಕಂಪನಿ ಕೊಟ್ಟ ಸಿಗರೇಟ್ ಮದ್ಯ ಸೇವನೆ ಮಾಡಿದ್ದು, ತನ್ನ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಮೃತ ಬಾಲಕನ ಪೋಷಕರು ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಜನವರಿಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ

ಜನವರಿ 31ರ ರಾತ್ರಿ ಸುಮಾರು 9 ಗಂಟೆ 40 ನಿಮಿಷಕ್ಕೆ ಈ ಘಟನೆ ನಡೆದಿದೆ. ಬೆಂಗಳುರಿನ ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನ ನಿವಾಸಿಯಾಗಿರುವ ಅಪ್ರಾಪ್ತ ಬಾಲಕ ಮದ್ಯದ ಅಮಲಿನಲ್ಲಿ, ಅಪಾರ್ಟ್ ಮೆಂಟ್ ನಿಂದ ಬಿದ್ದು ಮೃತಪಟ್ಟಿದ್ದಾನೆ.

ತನಿಖೆ ವೇಳೆ 15 ವರ್ಷದ ಬಾಲಕನಿಗೆ ಸ್ಥಳೀಯ ಸಂಸ್ಥೆಯೊಂದು ಸಿರಗೇಟ್ ಮತ್ತು ಮದ್ಯಪಾನ ಮಾಡಿಸಿದೆ. ಮೃತ ಬಾಲಕ ಮತ್ತು ಸ್ನೇಹಿತರು ಸ್ಥಳೀಯ ಕಂಪನಿಯಲ್ಲಿದ್ದಾಗ ಮದ್ಯ ಸೇವಿಸಿದ್ದಾನೆ ಎಂದು ತಿಳಿದುಬಂದಿದೆ. ಅಪ್ರಾಪ್ತನಿಗೆ ಮದ್ಯ ಕುಡಿಸಿದ ಮತ್ತು ಕರ್ನಾಟಕ ಮದ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಜೆಜೆ ಆಕ್ಟ್ ಅಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular