HomeLatest Newsಹುದ್ದೆ ಖಾಲಿ ಇಲ್ಲವೆಂದು ಅನುಕಂಪದ ಉದ್ಯೋಗ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಹುದ್ದೆ ಖಾಲಿ ಇಲ್ಲವೆಂದು ಅನುಕಂಪದ ಉದ್ಯೋಗ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಹುದ್ದೆ ಖಾಲಿ ಇಲ್ಲವೆಂಬ ಕಾರಣಕ್ಕೆ ಅನುಕಂಪ ಆಧಾರದ ಮೇಲೆ ಉದ್ಯೋಗ ನಿರಾಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ನಿರ್ದಿಷ್ಟ ಅನುದಾನಿತ ಕಾಲೇಜಿನಲ್ಲಿ ಉದ್ಯೋಗ ಖಾಲಿ ಇಲ್ಲವೆಂಬ ಕಾರಣಕ್ಕೆ ಅನುಕಂಪ ಆಧಾರದ ಮೇಲೆ ನೌಕರಿ ನಿರಾಕರಿಸಲು ಸಾಧ್ಯವಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ.

ಬಾಗಲಕೋಟೆಯ ಅನುದಾನಿತ ಆದರ್ಶ ಪಿಯು ಕಾಲೇಜಿನಲ್ಲಿ ಎಫ್.ಡಿ.ಎ. ನೌಕರರಾಗಿದ್ದ ತಂದೆ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪ ಆಧಾರದಲ್ಲಿ ನೌಕರಿ ನೀಡಲು ಕೋರಿ ಸಂತೋಷ್ ಯಮನಪ್ಪ ಸಲ್ಲಿಸಿದ್ದ ಮನವಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹುದ್ದೆ ಖಾಲಿ ಇಲ್ಲ ಎಂದು ಹಿಂಬರಹ ನೀಡಿದ್ದು, ಇದನ್ನು ಪ್ರಶ್ನಿಸಿ ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಹುದ್ದೆ ಈ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುದ್ದೆ ಖಾಲಿ ಇಲ್ಲ ಎಂಬ ಕಾರಣಕ್ಕೆ ಮನವಿ ತಿರಸ್ಕರಿಸಲಾಗುವುದಿಲ್ಲ. ಇತರೆ ಅನುದಾನಿತ ಸಂಸ್ಥೆಗಳಲ್ಲಿ ಹಂಚಿಕೆ ಮಾಡಬೇಕು ಎಂದು ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular