HomeKarnatakaBIG NEWS: ಅನುಕಂಪದ ಉದ್ಯೋಗ ಉತ್ತರಾಧಿಕಾರದ ಹಕ್ಕಲ್ಲ: ಹೈಕೋರ್ಟ್

BIG NEWS: ಅನುಕಂಪದ ಉದ್ಯೋಗ ಉತ್ತರಾಧಿಕಾರದ ಹಕ್ಕಲ್ಲ: ಹೈಕೋರ್ಟ್

ಬೆಂಗಳೂರು: ಅನುಕಂಪದ ಆಧಾರದಲ್ಲಿ ನೀಡುವ ಉದ್ಯೋಗ ಉತ್ತರಾಧಿಕಾರದ ಹಕ್ಕಲ್ಲ, ಸಂಕಷ್ಟಕ್ಕೆ ಸಿಲುಕಿದ ಕುಟುಂಬಕ್ಕೆ ನೀಡುವ ತುರ್ತು ಆರ್ಥಿಕ ನೆರವು ಮಾತ್ರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮೃತ ಸರ್ಕಾರಿ ಉದ್ಯೋಗಿಯ ವಿವಾಹಿತ ಪುತ್ರಿ ಉದ್ಯೋಗಕ್ಕೆ ಸಲ್ಲಿಸಿದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿದಾರರ ತಂದೆ ಅಟೆಂಡರ್ ಆಗಿ ಸೇವೆಯಲ್ಲಿರುವಾಗಲೇ ಮೃತಪಟ್ಟಿದ್ದರು. ಅವರ ಪುತ್ರಿ ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕೆ ಸಲ್ಲಿಸಿದ ಅರ್ಜಿಯನ್ನು ಸರ್ಕಾರ ತಿರಸ್ಕರಿಸಿದ್ದು, ಇದರ ವಿರುದ್ಧ ಪುತ್ರಿ ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿದಾರರ ತಂದೆ ಸರ್ಕಾರಿ ಕಚೇರಿಯಲ್ಲಿ ಅಟೆಂಡರ್ ಆಗಿದ್ದು 2005ರ ಜೂನ್ 21ರಂದು ಸೇವೆಯಲ್ಲಿರುವಾಗ ಮೃತಪಟ್ಟಿದ್ದರು. ಅವರ ಪುತ್ರಿ ಅನುಕಂಪ ಆಧಾರದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದರೂ ಅಂದಿನ ಕರ್ನಾಟಕ ನಾಗರೀಕ ಸೇವಾ ನಿಯಮಗಳ ಪ್ರಕಾರ ವಿವಾಹಿತ ಪುತ್ರಿಯರಿಗೆ ಹುದ್ದೆಗೆ ಅವಕಾಶವಿಲ್ಲದ ಕಾರಣ ಮನವಿಯನ್ನು ಸರ್ಕಾರ ತಿರಸ್ಕರಿಸಿದ್ದು, ಇದನ್ನು ಮರೆಮಾಚಿದ ಅವರು ತಮ್ಮ ಮನವಿಯನ್ನು ಬಾಕಿ ಇದೆ ಎಂದು ಕೋರ್ಟ್ ಗೆ ತಪ್ಪು ಮಾಹಿತಿ ನೀಡಿ ಹೊಸದಾಗಿ ಅರ್ಜಿ ಸಲ್ಲಿಸಲು ಅನುಮತಿ ಪಡೆದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2018ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದಾಗ ಇದು ಬೆಳಕಿಗೆ ಬಂದಿತ್ತು. ಎರಡನೇ ಮನವಿಯನ್ನು ಸರ್ಕಾರ ತಿರಸ್ಕರಿಸಿದ ಕಾರಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ ಸತ್ಯ ಮರೆಮಾಚಿದ್ದಕ್ಕೆ ಕಿಡಿಕಾರಿ ಅರ್ಜಿ ವಜಾಗೊಳಿಸಿದ್ದು, ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮಪ್ರಸಾದ್ ಮತ್ತು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ ಅವರಿದ್ದ ವಿಭಾಗೀಯ ಪೀಠ ಅನುಕಂಪದ ನೇಮಕಾತಿ ಉದ್ದೇಶ ಸರ್ಕಾರಿ ನೌಕರನ ನಿಧನದ ನಂತರ ಕುಟುಂಬ ಎದುರಿಸುವ ಆರ್ಥಿಕ ಸಂಕಷ್ಟ ನಿವಾರಿಸುವುದಾಗಿದೆ. ಇಲ್ಲಿ ಅವಲಂಬಿತ ಎಂದರೆ ಆರ್ಥಿಕವಾಗಿ ಮೃತರ ಮೇಲೆ ಸಂಪೂರ್ಣವಾಗಿ ಅವಲಂಬಿತರಾದವರು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

ವಿವಾಹಿತ ಪುತ್ರಿ ಸಾಮಾನ್ಯವಾಗಿ ತಂದೆಯ ಮೇಲೆ ಅವಲಂಬಿತರಾಗಿರುವುದಿಲ್ಲ. ಅವರ ನಿರ್ವಹಣೆ ಪತಿ ಮೇಲಿರುತ್ತದೆ. ನೌಕರ ಮೃತಪಟ್ಟ 20 ವರ್ಷದ ನಂತರ ಉದ್ಯೋಗ ನೀಡುವುದು ತಕ್ಷಣದ ಪರಿಹಾರ ಎನ್ನುವ ಆಶಯಕ್ಕೆ ವಿರುದ್ಧವಾಗಿದೆ. ಮೊದಲೇ ಅರ್ಜಿ ತಿರಸ್ಕರಿಸಿರುವುದನ್ನು ಮರೆಮಾಚಿ ನ್ಯಾಯಾಲಯದ ದಾರಿ ತಪ್ಪಿಸಿರುವುದು ಸರಿಯಲ್ಲವೆಂದು ನ್ಯಾಯಪೀಠ ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular