HomeKarnatakaಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ

ಕಾರವಾರ: ರಾಜ್ಯದಲ್ಲಿ ಮಂಗನ ಕಾಯಿಲೆ(KFD)ಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಬುಧವಾರ ಮಾತನಾಡಿದ ಸಿಎಂ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂಬತ್ತು ತಿಂಗಳಷ್ಟೇ ಆಗಿದ್ದು, ಮಂಗನ ಕಾಯಿಲೆ ತಡೆಗೆ ಲಸಿಕೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮಂಗನ ಕಾಯಿಲೆಯಿಂದ ಸಾವನ್ನಪ್ಪಿದವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular