HomeKarnatakaಯುವ ಜನರಿಗೆ ಗುಡ್‌ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಅಕಾಡೆಮಿ ಆರಂಭ, ವಿಶೇಷತೆಗಳು

ಯುವ ಜನರಿಗೆ ಗುಡ್‌ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಅಕಾಡೆಮಿ ಆರಂಭ, ವಿಶೇಷತೆಗಳು

ಕಲ್ಯಾಣ ಕರ್ನಾಟಕ ಭಾಗದ ಯುವ ಜನರಿಗೆ ಗುಡ್‌ನ್ಯೂಸ್. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ‘ಪ್ರಬುದ್ಧ ಅಕಾಡೆಮಿ’ ಕಲಬುರಗಿಯಲ್ಲಿ ಕೆಲವೇ ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಈ ಕುರಿತು ಐಟಿ & ಬಿಟಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ‘ಪ್ರಬುದ್ಧ ಅಕಾಡೆಮಿ’ ವಿಶೇಷಗಳ ಕುರಿತು ಸಹ ಮಾಹಿತಿ ನೀಡಿದ್ದಾರೆ.

ಸಚಿವರು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ, ಯುಪಿಎಸ್‌ಸಿ, ಕೆಪಿಎಸ್‌ಸಿ, ಬ್ಯಾಂಕಿಂಗ್, ಪೊಲೀಸ್ ಮತ್ತು ಇತರ ಸರ್ಕಾರಿ ನೇಮಕಾತಿಗಳಲ್ಲಿ ಆಸಕ್ತಿ ಹೊಂದಿರುವ ಯುವಜನರಿಗೆ ತರಬೇತಿ ನೀಡುವ ಸಂಸ್ಥೆ ಮುಂದಿನ ವಾರದಿಂದ ಕಾರ್ಯಾರಂಭ ಮಾಡಲಿದೆ.  ಕಲಬುರಗಿಯಲ್ಲಿರುವ ಈ ಪರೀಕ್ಷಾ ಪೂರ್ವ ತರಬೇತಿ ಕೇಂದ್ರವು ಕಲ್ಯಾಣ ಕರ್ನಾಟಕದಾದ್ಯಂತ ಸ್ಪರ್ಧಾತ್ಮಕ-ಪರೀಕ್ಷಾ ಸಿದ್ಧತೆಯನ್ನು ಬಲಪಡಿಸಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾಧಿಕಾರಿಗಳ ಪರಿಶೀಲನೆ: ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ‘ಪ್ರಬುದ್ಧ ಅಕಾಡೆಮಿ’ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದ್ಘಾಟನೆಗೂ ಮುನ್ನ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಿಂದ ಕಲಬುರಗಿ ನಗರದ ಹೊರವಲಯದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಕೆ.ಕೆ.ಆರ್.ಡಿ.ಬಿ.ಯ ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ‘ಪ್ರಬುದ್ಧ ಅಕಾಡೆಮಿ’ಯನ್ನು ಸ್ಥಾಪನೆ ಮಾಡಲಾಗಿದೆ.

ಈ ‘ಪ್ರಬುದ್ಧ ಅಕಾಡೆಮಿ’ ವಿಸ್ತೀರ್ಣ ಸುಮಾರು 10,449,35 ಚ.ಮೀ. ಆಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಲ್ಲಿ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ. ಸದ್ಯ ವಾರ್ಷಿಕ 500 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಯೋಜನೆ ರೂಪಿಸಲಾಗಿದೆ.

ಬಿ.ಫೌಜಿಯಾ ತರನ್ನುಮ್ ಮಾತನಾಡಿ, “ಭವಿಷ್ಯದಲ್ಲಿ ಪ್ರಬುದ್ಧ ಅಕಾಡೆಮಿಯಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದೆ. ಈ ಕೇಂದ್ರವು 125 ವಿದ್ಯಾರ್ಥಿ ಸಾಮರ್ಥ್ಯದ 4 ವಿಶಾಲವಾದ ಕೊಠಡಿಗಳನ್ನು ಒಳಗೊಂಡಿದೆ” ಎಂದರು.

“ಅಂದಾಜು 100 ವಿದ್ಯಾರ್ಥಿ ಸಾಮರ್ಥ್ಯ ಇರುವ ವಿವಿಧ ಸ್ಮರ್ಧಾತ್ಮಕ ಪರೀಕ್ಷೆಗೆ ಅಗತ್ಯ ಇರುವ ಪುಸ್ತಕಗಳ ಗ್ರಂಥಾಲಯ, ಆಡಳಿತ ವಿಭಾಗ, ಡಿಜಿಟಲ್ ಲೈಬ್ರರಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಿಯಾಯಿತಿ ದರದಲ್ಲಿ ಊಟ, ಉಪಹಾರ ವ್ಯವಸ್ಥೆ ಸಹ ಮಾಡಲಾಗಿದೆ” ಎಂದು ವಿವರಣೆ ನೀಡಿದರು.

ಪ್ರಬುದ್ಧ ಅಕಾಡೆಮಿ ವಿಶೇಷತೆಗಳು

• ಕ್ಯಾಂಪಸ್: 10,449.35 ಚದರ ಮೀ.

• ಸಾಮರ್ಥ್ಯ: 1000 ವಿದ್ಯಾರ್ಥಿಗಳು

• ವೆಚ್ಚ: ₹29.52 ಕೋಟಿ

• ಕೆಇಎ ಪರೀಕ್ಷೆಯ ಮೂಲಕ ಪ್ರವೇಶ (ಅರ್ಹತೆ ಆಧಾರಿತ)

• ಸ್ಮಾರ್ಟ್ ತರಗತಿ ಕೊಠಡಿಗಳು / ಡಿಜಿಟಲ್ ಪ್ರಸ್ತುತಿ ವ್ಯವಸ್ಥೆಗಳು, ಎವಿ ಬೆಂಬಲ

• ಡಿಜಿಟಲ್ ಗ್ರಂಥಾಲಯ ಮತ್ತು ಅಧ್ಯಯನ ಸಂಪನ್ಮೂಲ ಕೇಂದ್ರ (ಪುಸ್ತಕಗಳು, ಆಕಾರ ಮೂಲಗಳು, ಹಿಂದಿನ ಪತ್ರಿಕೆಗಳು + ಸ್ವಯಂ-ಅಧ್ಯಯನ ಅವಕಾಶ ಇತ್ಯಾದಿ)

• ಆನ್‌ಲೈನ್ ಪರೀಕ್ಷೆಗಳಿಗಾಗಿ ಕಂಪ್ಯೂಟರ್ ಲ್ಯಾಬ್, ಅಣಕು ಪರೀಕ್ಷೆಗಳು, ಇ-ಸಂಪನ್ಮೂಲಗಳು

• ಅಣಕು ಪರೀಕ್ಷಾ ಸಭಾಂಗಣಗಳು, ಮಾರ್ಗದರ್ಶನ ಮತ್ತು ಸಮಾಲೋಚನಾ ಕೊಠಡಿಗಳು, ವಿದ್ಯಾರ್ಥಿ ವಿರಾಮ/ ಗುಂಪು ಅಧ್ಯಯನ ಸ್ಥಳಗಳು

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular