HomeKarnatakaBREAKING: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಪಾತ್ರದ ಬಗ್ಗೆ ದೂರುದಾರೆ ಸುನಿತಾ ಚೌಹಾಣ್...

BREAKING: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಪಾತ್ರದ ಬಗ್ಗೆ ದೂರುದಾರೆ ಸುನಿತಾ ಚೌಹಾಣ್ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಪಾತ್ರವಿಲ್ಲ ಎಂದು ವಂಚನೆ ಪ್ರಕರಣದ ಬಗ್ಗೆ ದೂರುದಾರೆ ಸುನಿತಾ ಚೌಹಾಣ್ ಸ್ಪಷ್ಟನೆ ನೀಡಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯಲ್ಲಿ ವಿಚಾರಣೆಯ ಬಳಿಕ ಅವರು ಮಾತನಾಡಿ, ಪ್ರಹ್ಲಾದ್ ಜೋಶಿಯವರ ಪಾತ್ರವಿಲ್ಲ. ಅವರ ಸಹೋದರ ಗೋಪಾಲ್ ಜೋಶಿ ಬಂಧನವಾಗಿದೆ. ನಮಗೆ ಜೆಡಿಎಸ್ ಟಿಕೆಟ್ ಸಿಗುವ ಸಾಧ್ಯತೆ ಇತ್ತು. ಆದರೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಗೋಪಾಲ್ ಜೋಶಿ ಆಮಿಷವೊಡ್ಡಿದ್ದರು ಎಂದು ಹೇಳಿದ್ದಾರೆ.

ಪ್ರಹ್ಲಾದ್ ಜೋಶಿ, ಹೈಕಮಾಂಡ್ ನಾಯಕರನ್ನು ನಾನು ಭೇಟಿಯಾಗಿಲ್ಲ, ಗೋಪಾಲ್ ಜೋಶಿಯವರೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆ. ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ ಅವರ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular