HomeKarnatakaಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಲ್ಲಿ ವಂಚನೆಗೆ ಯತ್ನ: ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೃಷಿ ಭೂಮಿ...

ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಲ್ಲಿ ವಂಚನೆಗೆ ಯತ್ನ: ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೃಷಿ ಭೂಮಿ ವಸತಿ ಉದ್ದೇಶಕ್ಕೆ ಅನುಮೋದನೆಗೆ ಸೂಚನೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನಿಸಿದವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ ಎಸ್. ಶಿವಶಂಕರ್ ಈ ಬಗ್ಗೆ ದೂರು ನೀಡಿದ್ದಾರೆ. ಆಗಸ್ಟ್ 8 ರಿಂದ 27ರ ನಡುವೆ ವಿಶೇಷ ಕರ್ತವ್ಯಾಧಿಕಾರಿಯ ಹೆಸರು ಮತ್ತು ಲೆಟರ್ ಹೆಡ್ ಬಳಸಿಕೊಂಡಿರುವ ಅಪರಿಚಿತರು ಮೈಸೂರಿನ ಕೆಸರೆ ಗ್ರಾಮದಲ್ಲಿರುವ 5 ಎಕರೆ 22 ಗುಂಟೆ ಕೃಷಿ ಭೂಮಿಯನ್ನು ವಸತಿ ಉದ್ದೇಶಕ್ಕೆ ಅನುಮೋದಿಸುವಂತೆ ನಗರಾಭಿವೃದ್ಧಿ ಇಲಾಖೆ ಅಪಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಹೀಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನಿಸಿದ ಮೇರೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular