ಬೆಳ್ತಂಗಡಿ: ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ವೆಂಕಪ್ಪ ಕೋಟ್ಯಾನ್ ಎಂಬುವರು ದೂರು ನೀಡಿದ್ದಾರೆ.
ಸೌಜನ್ಯಾಳನ್ನು ಆಕೆಯ ಮಾವ ವಿಠಲ್ ಗೌಡ ಕೊಂದಿದ್ದಾಗಿ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದ್ದರು. ಸೌಜನ್ಯ ಮಾವ ವಿಠಲ್ ಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧವೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ವೆಂಕಪ್ಪ ಕೋಟ್ಯಾನ್ ದೂರು ನೀಡಿದ್ದು, ಸೌಜನ್ಯಾಳಿಗೆ ನ್ಯಾಯ ಒದಗಿಸುವ ಹೋರಾಟದ ದಾರಿಯನ್ನು ತಪ್ಪಿಸಲು ಸ್ನೇಹಮಯಿ ಕೃಷ್ಣ ದುರುದ್ದೇಶ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ರೀತಿಯ ಹೇಳಿಕೆಯ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಬೇಕು. ಸ್ನೇಹಮಯಿ ಕೃಷ್ಣ ಅವರನ್ನು ಕರೆಸಿ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಲಾಗಿದೆ.