HomeKarnatakaಮದುಮಗನಿಗೆ ದೈವ ವೇಷ ಹಾಕಿ ಅತಿರೇಕದ ವರ್ತನೆ: ದೂರು ದಾಖಲು

ಮದುಮಗನಿಗೆ ದೈವ ವೇಷ ಹಾಕಿ ಅತಿರೇಕದ ವರ್ತನೆ: ದೂರು ದಾಖಲು

ಮಡಿಕೇರಿ: ಕೊಡಗು ಜಿಲ್ಲೆಯ ನಾಪೊಕ್ಲು ಎಮ್ಮೆಮಾಡು ಗ್ರಾಮದಲ್ಲಿ ತುಳುನಾಡಿನ ದೈವ ಹೋಲುವ ರೀತಿಯಲ್ಲಿ ಮದುಮಗನಿಗೆ ದೈವದ ವೇಷ ಹಾಕಿ ಅತಿರೇಕದ ವರ್ತನೆ ತೋರಿಸಲಾಗಿದ್ದು, ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮದುಮಗನಿಗೆ ದೈವದ ವೇಷ ಹಾಕಿದ ಘಟನೆಯ ವಿಡಿಯೋಗಳು ಜಾಲತಾಣಗಳಲ್ಲಿ ಹರಿದಾಡಿದ್ದು, ದೈವಕ್ಕೆ ಅಪಮಾನವಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಮದುಮಗನಿಗೆ ದೈವದ ವೇಷ ತೊಡಿಸಿ ಹೀಯಾಳಿಸಿ ಮೆರವಣಿಗೆ ಮಾಡಿಸಲಾಗಿದೆ.

ಹಿಂದೂ ಪರ ಸಂಘಟನೆಗಳ ಪ್ರಮುಖರು ಈ ಕುರಿತಾಗಿ ದೂರು ದಾಖಲಿಸಿದ್ದಾರೆ. ಅಬ್ದುಲ್ ರಶೀದ್, ಹನೀಫ್, ಲತೀಪ್, ಮೊಹಮ್ಮದ್ ಫೈಸಲ್, ಬಶೀರ್, ಶಕೀರ್ ಎಂಬುವವರ ವಿರುದ್ಧ ದೂರು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular