‘ಬಿಗ್ ಬಾಸ್’ನಲ್ಲಿ ಮಹಿಳೆಯರ ಅಕ್ರಮ ಬಂಧನ ದೂರು: ಕ್ರಮಕ್ಕೆ ಎಸ್ಪಿಗೆ ಮಹಿಳಾ ಆಯೋಗ ಸೂಚನೆ

ಬೆಂಗಳೂರು: ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿದೆ ಎಂಬ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದೆ.

ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಈ ಕುರಿತಾಗಿ ಪತ್ರ ಬರೆದಿದ್ದು, ಸೂಕ್ತ ಕ್ರಮ ಕೈಗೊಂಡು ಐದು ದಿನದೊಳಗೆ ವರದಿ ನೀಡುವಂತೆ ಗಡುವು ನೀಡಿದ್ದಾರೆ. ‘ಬಿಗ್ ಬಾಸ್’ ರಿಯಾಲಿಟಿ ಶೋನ 11ನೇ ಆವೃತ್ತಿಯ ನರಕ ವಿಭಾಗದಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿದೆ. ಅವರಿಗೆ ಪೌಷ್ಟಿಕ ಆಹಾರ ನೀಡುತ್ತಿಲ್ಲ. ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಿಲ್ಲ. ಇದರಿಂದ ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ರಕ್ಷಿತಾ ಸಿಂಗ್ ಹಾಗೂ ಎಂ. ನಾಗಮಣಿ ಎಂಬುವರು ಮಹಿಳಾ ಆಯೋಗಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read