HomeKarnatakaಜೂ. 1 ರಿಂದ 61 ದಿನ ಕರಾವಳಿಯಲ್ಲಿ ಮೀನುಗಾರಿಕೆ ಸಂಪೂರ್ಣ ನಿಷೇಧ

ಜೂ. 1 ರಿಂದ 61 ದಿನ ಕರಾವಳಿಯಲ್ಲಿ ಮೀನುಗಾರಿಕೆ ಸಂಪೂರ್ಣ ನಿಷೇಧ

ಕಾರವಾರ: ಮುಂಗಾರು ಮಳೆ ಮತ್ತು ಮೀನುಗಳ ಸಂತಾನೋತ್ಪತ್ತಿಯ ಸಮಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮೀನುಗಾರಿಕೆ ಇಲಾಖೆ ಆದೇಶ ಹೊರಡಿಸಿದೆ.

ದೇಶದ ಕರಾವಳಿ ಪ್ರದೇಶದಲ್ಲಿ ಮಳೆಗಾಲದ ಅವಧಿಯನ್ನು ಮೀನುಗಳ ಸಂತಾನೋತ್ಪತ್ತಿಯ ಪ್ರಮುಖ ಕಾಲವೆಂದು ಪರಿಗಣಿಸುವ ಹಿನ್ನೆಲೆಯಲ್ಲಿ ಜಲಚರಗಳ ರಕ್ಷಣೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ.

ಯಾಂತ್ರಿಕೃತ ದೋಣಿಗಳು, 10 ಹೆಚ್.ಪಿ.ಗಿಂತ ಅಧಿಕ ಸಾಮರ್ಥ್ಯದ ಯಂತ್ರಗಳನ್ನು ಅಳವಡಿಸಿರುವ ಮೀನುಗಾರಿಕಾ ದೋಣಿಗಳ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇಂತಹ ದೋಣಿಗಳಲ್ಲಿ ಯಾವುದೇ ರೀತಿಯ ಬಲೆ ಅಥವಾ ಮೀನು ಹಿಡಿಯುವ ಸಾಧನ ಬಳಸಿ ಮೀನುಗಾರಿಕೆ ನಡೆಸುವಂತಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಷೇಧಿತ ಅವಧಿಯಲ್ಲಿ 10 ಹೆಚ್.ಪಿ.ಗಿಂತ ಕಡಿಮೆ ಸಾಮರ್ಥ್ಯದ ಮೋಟಾರಿಕೃತ ದೋಣಿಗಳು, ಸಾಂಪ್ರದಾಯಿಕ ನಾಡ ದೋಣಿಗಳಿಗೆ ಮಾತ್ರ ಮೀನುಗಾರಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದ್ದು, ಈ ದೋಣಿಗಳ ಮೂಲಕ ತೆರಳುವ ಮೀನುಗಾರರು ಕಡ್ಡಾಯವಾಗಿ ಜೀವ ರಕ್ಷಕ ಸಾಧನ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಮೀನುಗಾರಿಕೆ ನಡೆಸಲು ಅನುಮತಿ ಇದೆ.

ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಸರ್ಕಾರದಿಂದ ನೀಡಲಾಗುವ ಸಹಾಯಧನ ಸೌಲಭ್ಯ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular