HomeKarnatakaಕಾಂಪೌಂಡ್ ಗೇಟ್ ಬಿದ್ದು 5 ವರ್ಷದ ಮಗು ಸಾವು

ಕಾಂಪೌಂಡ್ ಗೇಟ್ ಬಿದ್ದು 5 ವರ್ಷದ ಮಗು ಸಾವು

ಬೆಂಗಳೂರು: ಆಟವಾಡುತ್ತಿದ್ದ ಮಗುವಿನ ಮೇಲೆ ಕಾಂಪೌಂಡ್ ಗೇಟ್ ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ.

5 ವರ್ಷದ ಗೌಸಿಯಾ ಮೃತ ಮಗು. ಘಟನೆಯಲ್ಲಿ ಗೌಸಿಯಾಳ ಅಣ್ಣ ಇಮಾಮ್, ತಂಗಿ ಶಕಿಲಾ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇನೋರ್ವ ಮಗು 3 ವರ್ಷದ ಸುಮಯ್ ಸ್ಥಿತಿ ಗಂಭೀರವಾಗಿದೆ.

ಮೃತ ಮಗು ಗೌಸಿಯಾ ಇಮಾಮ್ ಹಾಗೂ ರಮೀಜಾ ದಂಪತಿ ಮಗು. ಇವರು ಕಳೆದ 5 ತಿಂಗಳ ಹಿಂದೆಯಷ್ಟೇ ದ್ವಾರಕಾನಗರದಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ದಂಪತಿ ಬಸ್ ನಿಲ್ದಾಣದ ಬಳಿ ಹಣ್ಣಿನ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳೆಲ್ಲ ಸೇರಿ ಮನೆ ಮುಂದೆ ಆಟವಾಡುತ್ತಿದ್ದಾಗ ಕಾಂಪೌಂಡ್ ಗೇಟ್ ಏಕಾಏಕಿ ಬಿದ್ದಿದ್ದು, ಗೇಟ್ ಅಡಿ ಸಿಲುಕಿದ ಗೌಸಿಯಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular