ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025: ಗಣತಿದಾರರಿಗೆ ನಿಖರ ಮಾಹಿತಿ ನೀಡಿ : ಜಿಲ್ಲಾಧಿಕಾರಿ

ಬಳ್ಳಾರಿ: ನ್ಯಾ.ಡಾ.ಹೆಚ್.ಎನ್. ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯಯು ಜಿಲ್ಲೆಯಲ್ಲಿ ಮೇ 05 ರಿಂದ 23 ರವರೆಗೆ 03 ಹಂತಗಳಲ್ಲಿ ಸಮೀಕ್ಷೆ ನಡೆಸಲು ಕ್ರಮವಹಿಸಲಾಗಿದ್ದು, ಸಾರ್ವಜನಿಕರು ತಮ್ಮ ಕುಟುಂಬದ ಜಾತಿ, ಉಪಜಾತಿ ಮತ್ತು ಇತರೆ ಮಾಹಿತಿಗಳನ್ನು ನಿಖರವಾಗಿ ಗಣತಿದಾರರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದ 03 ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆöÊನರ್ಗಳನ್ನು, 50 ವಿಧಾನಸಭಾ ಕ್ಷೇತ್ರವಾರು ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೆöÊನರ್ ಹಾಗೂ 125 ಸೂಪರ್ ವೈಸರ್, 2,674 ಗಣತಿದಾರರರು ಮತ್ತು 200 ಹೆಚ್ಚುವರಿ ಗಣತಿದಾರರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೆöÊನರ್ಗಳಿಗೆ ಜಿಲ್ಲಾಡಳಿತದಿಂದ ತರಬೇತಿ ನೀಡಲಾಗಿದೆ. ಮಾಸ್ಟರ್ ಟ್ರೆöÊನರ್ಗಳು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿನ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೆಲವು ಕುಟುಂಬಗಳ ಮಾದರಿ ಸಮೀಕ್ಷೆ ಕೈಗೊಂಡಿದ್ದು, ಸಮೀಕ್ಷೆಯಲ್ಲಿ ಬಳಸುವ ಮೊಬೈಲ್ ಆಪ್ ಬಗ್ಗೆ ಪರೀಕ್ಷೆ ನಡೆಸಿ, ಅದರ ಬಳಕೆ ಬಗ್ಗೆ ಖಾತರಿಪಡಿಸಿಕೊಂಡಿದ್ದಾರೆ.

ಮೇ 03 ರಂದು ಸಿರುಗುಪ್ಪದ ವಿವೇಕಾನಂದ ವಿದ್ಯಾಸಂಸ್ಥೆ, ಸಂಡೂರಿನ ಛತ್ರಪತಿ ಶಿವಾಜಿ ಶಾಲೆ, ಕುರುಗೋಡಿನ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ ನಗರದ ಸೆಂಟ್ ಜಾನ್ಸ್ ಕಾಲೇಜುಗಳಲ್ಲಿ 05 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 125 ಸೂಪರ್ ವೈಸರ್, 2,674 ಗಣತಿದಾರರು ಹಾಗೂ 200 ಹೆಚ್ಚುವರಿ ಗಣತಿದಾರರಿಗೆ ಸಮೀಕ್ಷೆ ಕುರಿತಂತೆ ಮಾಸ್ಟರ್ ಟ್ರೆöÊನರ್ ಗಳಿಂದ ತರಬೇತಿ ಮತ್ತು ಸಮೀಕ್ಷೆಗೆ ಬಳಸುವ ಮೊಬೈಲ್ ಅಪ್ ತಂತ್ರಾAಶದ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ ಎಂದಿದ್ದಾರೆ.
ಸಹಾಯವಾಣಿ ಕೇಂದ್ರ ಆರಂಭ:
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಮೀಕ್ಷೆಗೆ ಸಂಬAಧಿಸಿದAತೆ ಸಾರ್ವಜನಿಕರು ತಮ್ಮ ಅಹವಾಲು, ಸಮಸ್ಯೆಗಳನ್ನು ಸಲ್ಲಿಸಲು ಹಾಗೂ ಸಮೀಕ್ಷೆ ಕುರಿತ ಮಾಹಿತಿ ಪಡೆಯಲು ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ದೂರವಾಣಿ ಸಂಖ್ಯೆ: 8277888866 / 08392277100 ಆಗಿದ್ದು, ಸಾರ್ವಜನಿಕರು ಈ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಜಿಲ್ಲಾ ಮಟ್ಟದ ಸಮೀಕ್ಷಾ ಕಾರ್ಯವನ್ನು ಸುಸೂತ್ರವಾಗಿ ಯಾವುದೇ ಲೋಪದೋಷಗಳು ಉಂಟಾಗದAತೆ ಸಮೀಕ್ಷೆ ಕಾರ್ಯ ಯಶಸ್ವಿಗೊಳಿಸಲು ವಿಧಾನಸಭಾ ಕ್ಷೇತ್ರವಾರು ಜಿಲ್ಲಾ ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಸಮೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ, ಸಮಸ್ಯೆ ಉಂಟಾದಲ್ಲಿ ನೋಡಲ್ ಅಧಿಕಾರಿಗಳಿಗೆ ಸಂಪರ್ಕಿಸಬಹುದು.
ವಿಧಾನಸಭಾ ಕ್ಷೇತ್ರವಾರು ನೋಡೆಲ್ ಅಧಿಕಾರಿಗಳ ನೇಮಕ:
ಬಳ್ಳಾರಿ ನಗರ: ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ್ (ಮೊ.9686409096).

ಬಳ್ಳಾರಿ ಗ್ರಾಮೀಣ: ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ (ಮೊ.8277930401).
ಕಂಪ್ಲಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಭಾನುಮತಿ (ಮೊ.9986609038).
ಸಿರುಗುಪ್ಪ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಜಲಾಲಪ್ಪ.ಎ.ಕೆ (ಮೊ.8971177872).
ಸಂಡೂರು: ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ (ಮೊ.9448999248).
ಸಮೀಕ್ಷೆ ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿನ ಸದಸ್ಯರಾದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಇತರೆ ಇಲಾಖೆಗಳ ಎಲ್ಲಾ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಸಮೀಕ್ಷೆ ಯಶಸ್ವಿಗೊಳಿಸಲು ನಿರ್ದೇಶನ ನೀಡಲಾಗಿದೆ.
ಸಮನ್ವಯ ಸಮಿತಿ ರಚನೆ:
05 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದ್ದು, ಇದರಲ್ಲಿ ಉಪ ವಿಭಾಗಾಧಿಕಾರಿಗಳು, ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಆಯಾ ತಾಲ್ಲೂಕಿನ ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯಾಧಿಕಾರಿಗಳು ಪಟ್ಟಣ ಪಂಚಾಯಿತಿ/ನಗರಸಭೆ/ಪುರಸಭೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸದಸ್ಯರಾಗಿರುತ್ತಾರೆ.
ಜಿಲ್ಲೆಯಲ್ಲಿನ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಕುಟುಂಬಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮಾಹಿತಿಗಳನ್ನೊಳಗೊಂಡAತೆ ಉಪ ಜಾತಿ ವಿವರಗಳನ್ನು ಗಣತಿದಾರರು ಪಡೆಯಲಿದ್ದಾರೆ. ಎಲ್ಲಾ ಗಣತಿದಾರರು ಶಿಕ್ಷಣ ಇಲಾಖೆಯ ಶಿಕ್ಷಕರಾಗಿದ್ದು, ಸಮೀಕ್ಷೆ ಕಾರ್ಯವನ್ನು ನಡೆಸಲಿದ್ದಾರೆ.
ಮೂರು ಹಂತದ ಸಮೀಕ್ಷೆ:
ಮೊದಲನೇ ಹಂತದ ಮನೆ-ಮನೆ ಸಮೀಕ್ಷೆಯಲ್ಲಿ 05-05-2025 ರಿಂದ 17-05-2025 ರವರೆಗೆ ನಡೆಯಲಿದ್ದು, ಎರಡನೇ ಹಂತದ ಸಮೀಕ್ಷೆಯಲ್ಲಿ ಸಮೀಕ್ಷೆಯ ಬ್ಲಾಕ್ಗಳಲ್ಲಿ ವಿಶೇಷ ಶಿಬಿರಗಳನ್ನು ಏರ್ಪಡಿಸಿ, ಮನೆ ಮನೆಯ ಭೇಟಿಯ ಅವಧಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲು 19-05-2025 ರಿಂದ 21-05-2025 ರೊಳಗೆ ಸಮೀಕ್ಷೆ ಮಾಡಲಾಗುವುದು. ಮೂರನೇ ಹಂತದಲ್ಲಿ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಶಿಷ್ಟ ಜಾತಿ ಕುಟುಂಬಗಳಿಗೆ ಅವಕಾಶವಿದ್ದು, 19-05-2025 ರಿಂದ 23-05-2025 ರವರೆಗೆ ಎರಡು ಹಂತದ ಸಮೀಕ್ಷೆಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಬಹುದಾಗಿದೆ.
ಈ ಸಮೀಕ್ಷಾ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ, ನಿಖರವಾಗಿ ಪೂರ್ಣಗೊಳಿಸಲು ಎಲ್ಲಾ ನಿಯೋಜಿತ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಶಿಕ್ಷಕರು, ಎಲ್ಲಾ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read