HomeKarnatakaಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕಂಪ್ಯೂಟರ್ ಪರೀಕ್ಷೆ ಪಾಸಾದವರಿಗೆ ವೇತನದ ಜತೆ 5000 ರೂ. ಪ್ರೋತ್ಸಾಹ...

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕಂಪ್ಯೂಟರ್ ಪರೀಕ್ಷೆ ಪಾಸಾದವರಿಗೆ ವೇತನದ ಜತೆ 5000 ರೂ. ಪ್ರೋತ್ಸಾಹ ಧನ

ಬೆಂಗಳೂರು: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಾಸಾದ ಸರ್ಕಾರಿ ನೌಕರರಿಗೆ 5000 ರೂ. ಪ್ರೋತ್ಸಾಹ ಧನ ನೀಡಲು ಸರ್ಕಾರ ಆದೇಶಿಸಿದೆ.

2021 ರ ಏಪ್ರಿಲ್ 17 ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾದ ಅರ್ಹ ಸೇವಾನಿರತ ಸರ್ಕಾರಿ ನೌಕರರಿಗೆ ಈ ಸೌಲಭ್ಯ ಅನ್ವಯವಾಗಲಿದೆ. ಸರ್ಕಾರಿ ನೌಕರರು ಹಾಜರುಪಡಿಸುವ ಡಿಜಿಟಲ್ ಸಹಿ ಇರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪ್ರಮಾಣ ಪರಿಶೀಲಿಸಿ ಪಾಸಾದ ದಿನಾಂಕ ಖಚಿತಪಡಿಸಿಕೊಂಡು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಿಗಳು ಪ್ರೋತ್ಸಾಹಧನ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ಪ್ರೋತ್ಸಾಹ ಧನವನ್ನು ಸರ್ಕಾರಿ ನೌಕರರು ಪಡೆಯುವ ವೇತನದಲ್ಲಿ ಸೇರಿಸಿ ನೀಡಬೇಕು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular