BIGG NEWS : ರಾಜ್ಯದಲ್ಲಿ ಮತ್ತೆ ‘ಕೋವಿಡ್’ ಆತಂಕ : ಇಂದು ತಾಂತ್ರಿಕಾ ಸಲಹಾ ಸಮಿತಿ ಜೊತೆ ಸರ್ಕಾರದ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೋವಿಡ್’ ಆತಂಕ ಮನೆ ಮಾಡಿದ್ದು, ಈ ಹಿನ್ನೆಲೆ ಇಂದು ತಾಂತ್ರಿಕಾ ಸಲಹಾ ಸಮಿತಿ ಜೊತೆ ರಾಜ್ಯ ಸರ್ಕಾರ ಮಹತ್ವದ ಸಭೆ ನಡೆಸಲಿದೆ .

ನೆರೆಯ ಕೇರಳದಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿರುವ ಸರ್ಕಾರ ಕಟ್ಟು ನಿಟ್ಟಿನ ಶಿಫಾರಸ್ಸು ಮಾಡುವ ಸಾಧ್ಯತೆಯಿದೆ.

ಕೇರಳದಲ್ಲಿ ಪ್ರಕರಣ ಹೆಚ್ಚಾಗಿರುವ ಹಾಗೂ ಹೊಸತಳಿ ಪತ್ತೆಯಾದ ಬೆನ್ನಲ್ಲೇ ನಿನ್ನೆ ಆರೋಗ್ಯ ಸಚಿವರು ತುರ್ತು ಸಭೆ ನಡೆಸಿದ್ದರು, ಈ ಬೆನ್ನಲ್ಲೇ ಇಂದು ಸರ್ಕಾರ ತಾಂತ್ರಿಕ ಸಲಹಾ ಸಮಿತಿಯ ಜೊತೆ ಸಭೆ ಸೇರುತ್ತಿದ್ದು ಸರ್ಕಾರಕ್ಕೆ ಯಾವ್ಯಾವ ನಿಯಂತ್ರಣ ಕ್ರಮ ಕೈಗೊಳ್ಳಲು ಸಲಹೆ ನೀಡಲಿದೆ ಎಂಬ ಕುತೂಹಲ ಮೂಡಿದೆ.

ಒಂದು ವೇಳೆ ಸೋಂಕು ಪ್ರಕರಣ ಹೆಚ್ಚುತ್ತಿರುವುದು ದೃಢಪಟ್ಟರೆ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ಹೆಚ್ಚು ಜನರು ಒಂದು ಕಡೆ ಸೇರದಂತೆ ನಿರ್ಬಂಧಿಸಲು ಶಿಫಾರಸು ಮಾಡುವ ಸಾಧ್ಯತೆಯಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read