HomeLatest NewsBREAKING: ಐಟಿ ಅಧಿಕಾರಿಗಳು ಕಚೇರಿಯಲ್ಲಿದ್ದಾಗಲೇ ಸಿ.ಜೆ.ರಾಯ್ ಆತ್ಮಹತ್ಯೆ

BREAKING: ಐಟಿ ಅಧಿಕಾರಿಗಳು ಕಚೇರಿಯಲ್ಲಿದ್ದಾಗಲೇ ಸಿ.ಜೆ.ರಾಯ್ ಆತ್ಮಹತ್ಯೆ

ದಕ್ಷಿಣ ಭಾರತದ ಖ್ಯಾತ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ.ಜೆ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ವರ್ತೂರು ಬಳಿ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಚೇರಿಯ ತಮ್ಮದೇ ಚೇಂಬರ್ ನಲ್ಲಿ ಉದ್ಯಮಿ ಸಿ.ಜೆ.ರಾಯ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾನ್ಫಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮನೆ ಹಾಗೂ ಕಚೇರಿ ಮೇಲೆ ಪದೇ ಪದೇ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದರು. ಇಂದು ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇಂದು ಐಟಿ ಅಧಿಕಾರಿಗಳು ಕಚೇರಿ ಮೇಲೆ ದಾಳಿ ನಡೆಸಿದ್ದ ಸಂದರ್ಭದಲ್ಲಿಯೇ ಸಿ.ಜೆ.ರಾಯ್ ತಮ್ಮ ಚೇಂಬರ್ ನಲ್ಲಿ ಎದೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೂ ಮುನ್ನ ಕಚೇರಿಯಲ್ಲಿಯೇ ಐಟಿ ಅಧಿಕಾರಿಗಳಿಂದ ವಿಚಾರಣೆಯನ್ನೂ ರಾಯ್ ಎದುರಿಸಿದ್ದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿಯಿಂದ ಹೆದರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ರಿಯಲ್ ಎಸ್ಟೇಟ್ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡು ಸಂಕಷ್ಟಗಳನ್ನು ಮೆಟ್ಟಿ ನಿಂತು ಯಶಸ್ವಿ ಉದ್ಯಮಿಯಾಗಿದ್ದ ಸಿ.ಜೆ.ರಾಯ್ ಐಟಿ ದಾಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಂಬಲರ್ಹವಲ್ಲ ಎನ್ನಲಾಗುತ್ತಿದೆ. ಸಿ.ಜೆ.ರಾಯ್ ಅವರ ಆತ್ಮಹತ್ಯೆಗೆ ನಿಖರ ಕಾರಣವೇನು? ಎಂಬುದು ತನಿಖೆ ಬಳಿಕವೇ ಬಹಿರಂಗವಾಗಬೇಕಿದೆ.

ಘಟನಾ ಸ್ಥಳಕ್ಕೆ ಅಶೋಕ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆದಿದೆ.

65ಕ್ಕೂ ಹೆಚ್ಚು ರಿಯಲ್ ಎಸ್ಟೇಟ್ ಉದ್ಯಮದ ಯೋಜನೆ ರೂಪಿಸಿದ್ದ ಸಿ.ಜೆ.ರಾಯ್, ಸಿನಿಮಾ ನಿರ್ಮಾಣವನ್ನೂ ಮಾಡುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ನೆರವನ್ನು ನೀಡುತ್ತಿದ್ದರು. ಕಾನ್ಫಿಡೆಂಟ್ ಗ್ರೂಪ್ ಎಂಬ ಬೃಹತ್ ಕಂಪನಿಯ ಉದ್ಯಮಿಯಾಗಿದ್ದವರು ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular