HomeKarnatakaBIG NEWS: ಬಹಿರಂಗವಾಯ್ತು ಬೆಂಗಳೂರಿಗೆ ಬಂದಿದ್ದ ನಾಯಿ ಮಾಂಸದ ಅಸಲಿಯತ್ತು: ಮೇಕೆ ಮಾಂಸ ದೃಢ

BIG NEWS: ಬಹಿರಂಗವಾಯ್ತು ಬೆಂಗಳೂರಿಗೆ ಬಂದಿದ್ದ ನಾಯಿ ಮಾಂಸದ ಅಸಲಿಯತ್ತು: ಮೇಕೆ ಮಾಂಸ ದೃಢ

ಬೆಂಗಳೂರು: ಕುರಿ ಮಾಂಸದ ಜೊತೆ ನಾಯಿ ಮಾಂಸ ಬೆರೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಕೆ ಮಾಂಸ ಎಂಬುದು ದೃಢಪಟ್ಟಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಈ ಬಗ್ಗೆ ವರದಿ ನೀಡಿದ್ದಾರೆ. ಮಾಂಸದ ಸ್ಯಾಂಪಲ್ ಟೆಸ್ಟಿಂಗ್ ವರದಿಯನ್ನು ಆಹಾರ ಇಲಾಖೆ ಪ್ರಕಟಿಸಿದೆ. ಲ್ಯಾಬ್ ರಿಪೋರ್ಟ್ ನಲ್ಲಿ ಮೇಕೆ ಮಾಂಸ ಎನ್ನುವುದು ದೃಢಪಟ್ಟಿದೆ.

ಶಿರೋಹಿ ತಳಿ ಮೇಕೆ ಮಾಂಸ ಎಂದು ವರದಿಯಲ್ಲಿ ಬಹಿರಂಗವಾಗಿದೆ. ನಾಯಿ ಮಾಂಸ ಅಲ್ಲ, ಅದು ಕುರಿ ಮಾಂಸ ಎಂದು ವರದಿ ಬಿಡುಗಡೆಯಾಗಿದೆ. ನಾಯಿ ಮಾಂಸವನ್ನು ತರಿಸಲಾಗುತ್ತದೆ ಎಂದು ಹೋರಾಟಗಾರ ಪುನೀತ್ ಕೆರೆಹಳ್ಳಿ ಗಂಭೀರ ಆರೋಪ ಮಾಡಿದ್ದರು. ನಾಯಿ ಮಾಂಸ ಬೆರೆಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ ಹೈದರಾಬಾದ್ ಲ್ಯಾಬ್ ಗೆ ಆಹಾರ ಇಲಾಖೆ ಸ್ಯಾಂಪಲ್ ಕಳುಹಿಸಿತ್ತು. ಲ್ಯಾಬ್ ರಿಪೋರ್ಟ್ ನಲ್ಲಿ ಮೇಕೆ ಮಾಂಸ ಎನ್ನುವುದು ದೃಢಪಟ್ಟಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular