HomeKarnatakaಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಗೊಂದಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆರ್. ಅಶೋಕ್ ಒತ್ತಾಯ

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಗೊಂದಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆರ್. ಅಶೋಕ್ ಒತ್ತಾಯ

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಗೊಂದಲ, ಅಭ್ಯರ್ಥಿಗಳು ಪರೀಕ್ಷೆಯಿಂದ ಹೊರಗುಳಿಯುವಂತಾಗಿದ್ದು, ವೈಫಲ್ಯದ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.

ಮತ್ತೊಂದು ನೇಮಕಾತಿ ಪರೀಕ್ಷೆ, ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರದ ವೈಫಲ್ಯ. ಮಗದೊಮ್ಮೆ ರಾಜ್ಯದ ಯುವಕರ ಭವಿಷ್ಯದೊಂದಿಗೆ ಚೆಲ್ಲಾಟ ಆಡಿದ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ಟೀಕಿಸಿದ್ದಾರೆ.

ವಿಜಯಪುರದಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ವಿಳಂಬ, OMR ಶೀಟ್‌ಗಳ ಗೊಂದಲ ಹಾಗೂ ಅಭ್ಯರ್ಥಿಗಳು ಪರೀಕ್ಷೆಯಿಂದ ಹೊರನಡೆಯುವಂತಾದ ಘಟನೆ ಆಡಳಿತದ ಸಂಪೂರ್ಣ ವೈಫಲ್ಯ ಮತ್ತು ಕ್ಷಮಿಸಲಾಗದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ. ಸಾವಿರಾರು ಅಭ್ಯರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಈ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅವರಿಗೆ ನೀಡಿದ್ದು ಗೊಂದಲ, ಅಸಮರ್ಥ ಆಡಳಿತ ಮತ್ತು ಭಗ್ನಗೊಂಡ ಕನಸುಗಳ ಗುಚ್ಛವನ್ನ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೈಫಲ್ಯದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಗೊಂದಲವಾದ ಪರೀಕ್ಷೆಯನ್ನು ಸಂಬಂಧಿತ ಕೇಂದ್ರದಲ್ಲಿ ರದ್ದುಗೊಳಿಸಿ ಮರುಪರೀಕ್ಷೆ ನಡೆಸಬೇಕು. ಜೊತೆಗೆ ಸ್ವತಂತ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. “ಯುವಕರ ಭವಿಷ್ಯ ಹಾಳು ಮಾಡಿದ ಸರ್ಕಾರಕ್ಕೆ ಉತ್ತರದಾಯಿತ್ವ ಯಾರು?” ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಗೃಹ ಸಚಿವರಿಂದ ತಕ್ಷಣವೇ ರಾಜೀನಾಮೆ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular