BIG NEWS : ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ‘RCB’ ಗೆ ಅಭಿನಂದನೆಗಳು : CM ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ RCB ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ಸಿಬಿಯ ಹುಡುಗರು ನನಸಾಗಿಸಿದ್ದಾರೆ. ಆರ್ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read