HomeKarnatakaBIG NEWS: ಕಾಂಗ್ರೆಸ್ ಸರ್ಕಾರ ಉರುಳಿಸಲು 50 ಶಾಸಕರು ಸಜ್ಜು; ಬಿಜೆಪಿ ಶಾಸಕನಿಂದ ಸ್ಪೋಟಕ ಮಾಹಿತಿ

BIG NEWS: ಕಾಂಗ್ರೆಸ್ ಸರ್ಕಾರ ಉರುಳಿಸಲು 50 ಶಾಸಕರು ಸಜ್ಜು; ಬಿಜೆಪಿ ಶಾಸಕನಿಂದ ಸ್ಪೋಟಕ ಮಾಹಿತಿ

ಬೆಂಗಳೂರು: ‘ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳಿಸಲು ಅವರದೇ ಪಕ್ಷದ 50 ಶಾಸಕರು ಸಜ್ಜಾಗಿದ್ದಾರೆ. ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಎಂದು ಅವರು ಕಾಯುತ್ತಿದ್ದಾರೆ.’

ಹೀಗೆಂದು ಹೇಳಿದ್ದು ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಕ್ಷಿಣ ಕಾಶಿ ಶಿವಗಂಗೆಯಲ್ಲಿ ಮಾತನಾಡಿದ ಅವರು, ಸರ್ಕಾರ ಉರುಳಿಸಲು 50 ಶಾಸಕರು ಸಜ್ಜಾಗಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ಯಾರಂಟಿ ಯೋಜನೆ ನೀಡಿ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಆಡಳಿತ ಸಂಪೂರ್ಣ ಕುಸಿದಿದೆ ಎಂದು ದೂರಿದ್ದಾರೆ. ಮೊದಲನೇ ಅವಧಿಯಲ್ಲಿ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರು ಎಂದು ನಾನು ಮಾತನಾಡಿಸಿದ ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. 50 ಶಾಸಕರು ಸರ್ಕಾರ ಉರುಳಿಸಲು ಸಿದ್ಧರಾಗಿದ್ದಾರೆ. 5 ಬಾರಿ ಗೆದ್ದಂತಹ ಕಾಂಗ್ರೆಸ್ ಶಾಸಕರೇ ಹೇಳುತ್ತಾರೆ. ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ಎಂದು ಅವರು ಕಾಯುತ್ತಿದ್ದಾರೆ ಎಂದು ಸುರೇಶ್ ಗೌಡ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular