ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ಬಿಜೆಪಿ ಗೂಂಡಾಗಳ ದಾಳಿ: ಕಾಂಗ್ರೆಸ್ ಆರೋಪ

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ತನ್ನ ಪಕ್ಷದ ಕಚೇರಿಯ ಮೇಲೆ ಭಾನುವಾರ ಮಧ್ಯರಾತ್ರಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಇದರಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರಿಗೂ ಗಾಯಗಳಾಗಿವೆ. ಅಮೇಥಿಯಲ್ಲಿರುವ ಕಾಂಗ್ರೆಸ್ ಕಚೇರಿಯ ಹೊರಗೆ ನಿಲ್ಲಿಸಲಾಗಿದ್ದ ಹಲವಾರು ವಾಹನಗಳನ್ನೂ ಧ್ವಂಸಗೊಳಿಸಲಾಗಿದೆ. ಸ್ಥಳೀಯ ಜನರ ವಾಹನಗಳಿಗೂ ಹಾನಿಯಾಗಿದೆ. ಆದರೆ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಪಕ್ಷ ಆರೋಪಿಸಿದೆ.

ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ಭಯಭೀತರಾಗಿದ್ದಾರೆ. ಸೋಲಿನ  ಹತಾಶೆಯಿಂದ ಬಿಜೆಪಿ ಗೂಂಡಾಗಳು ಲಾಠಿ ಮತ್ತು ರಾಡ್‌ಗಳೊಂದಿಗೆ ಶಸ್ತ್ರಸಜ್ಜಿತರಾಗಿ ಬಂದು ಅಮೇಥಿಯ ಕಾಂಗ್ರೆಸ್ ಕಚೇರಿಯ ಹೊರಗೆ ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಮೇಠಿ ಜನರ ಮೇಲೆ ಹಲ್ಲೆ ಮಾಡಿದ್ದು, ಈ ದಾಳಿಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ಅಮೇಥಿಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬುದನ್ನು ತೋರಿಸುತ್ತದೆ ಎಂದು ಆಪಾದಿತ ಘಟನೆಯ ವೀಡಿಯೊ ಹಂಚಿಕೊಂಡು ಕಾಂಗ್ರೆಸ್ ತಿಳಿಸಿದೆ.

ಅಮೇಥಿ ಪೊಲೀಸರು ಪ್ರತಿಕ್ರಿಯೆ ನೀಡಿ, ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಗೌರಿಗಂಜ್ ಪೊಲೀಸ್ ಠಾಣೆಯಲ್ಲಿ ಬಂದಿರುವ ದೂರಿನ ಆಧಾರದ ಮೇಲೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಮೇಥಿಯಿಂದ ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ಗಾಂಧಿ ಕುಟುಂಬದ ನಿಕಟವರ್ತಿ ಮತ್ತು ನಿಷ್ಠಾವಂತ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಕಿಶೋರಿ ಲಾಲ್ ಶರ್ಮಾ ಮೂಲತಃ ಪಂಜಾಬ್‌ನ ಲೂಧಿಯಾನದವರು. ರಾಯ್ ಬರೇಲಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಅವರ ಅನುಪಸ್ಥಿತಿಯಲ್ಲಿ ಅವರು ಮ್ಯಾನೇಜರ್ ಆಗಿದ್ದರು.

ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಉನ್ನತ ನಾಯಕ ರಾಹುಲ್ ಗಾಂಧಿಯಂತಹ ಪಕ್ಷದ ದಿಗ್ಗಜರು ಯಶಸ್ವಿಯಾಗಿ ಸ್ಪರ್ಧಿಸಿದ ಅಮೇಥಿ ದಶಕಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ. 2019 ರಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಗೆಲ್ಲುವವರೆಗೂ ಈ ಸ್ಥಾನವನ್ನು ಗಾಂಧಿ ಕುಟುಂಬದ ಭದ್ರಕೋಟೆ ಎಂದು ಕರೆಯಲಾಗುತ್ತಿತ್ತು.

ಅಮೇಥಿ ಕ್ಷೇತ್ರದಿಂದ 25 ವರ್ಷಗಳ ನಂತರ ಕಿಶೋರಿ ಲಾಲ್ ಶರ್ಮಾ ಅವರ ರೂಪದಲ್ಲಿ ಮೊದಲ ಬಾರಿಗೆ ಗಾಂಧಿ ಕುಟುಂಬೇತರ ಅಭ್ಯರ್ಥಿ ಸ್ಪರ್ಧಿಸಿದ್ದಾರೆ. ಸೋನಿಯಾ ಗಾಂಧಿ 1999 ರಲ್ಲಿ ಅಭ್ಯರ್ಥಿಯಾಗಿದ್ದರು. ಅವರು 2004 ರಲ್ಲಿ ರಾಯ್ ಬರೇಲಿಗೆ ಸ್ಥಳಾಂತರಗೊಂಡ ನಂತರ, ರಾಹುಲ್ ಗಾಂಧಿ ಅವರು ಅಮೇಥಿಯಲ್ಲಿ 2019 ರವರೆಗೆ ಸಂಸದರಾಗಿದ್ದರು.

https://twitter.com/SupriyaShrinate/status/1787188777972068497

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read