NSUI ಉಸ್ತುವಾರಿಯಾಗಿ JNU ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ನೇಮಕ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರನ್ನು ಗುರುವಾರ ಕಾಂಗ್ರೆಸ್ ತನ್ನ ವಿದ್ಯಾರ್ಥಿ ವಿಭಾಗದ ಎಐಸಿಸಿ ಉಸ್ತುವಾರಿಯನ್ನಾಗಿ ನೇಮಿಸಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕನ್ಹಯ್ಯಾ ಕುಮಾರ್ ಅವರನ್ನು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ(ಎನ್‌ಎಸ್‌ಯುಐ) ಎಐಸಿಸಿ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

NSUI ನೇತೃತ್ವವನ್ನು ನೀರಜ್ ಕುನಾಡನ್ ವಹಿಸಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಕುಮಾರ್ ಭಾಗವಹಿಸಿದ್ದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸಂಪೂರ್ಣ ದೂರ ನಡೆದು ಯಾತ್ರೆಯಲ್ಲಿ ಭಾಗವಹಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read