ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ : ಬಿಜೆಪಿ ಗಂಭೀರ ಆರೋಪ

ಬೆಂಗಳೂರು : ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ( CONGRESS)  ಕೈವಾಡವಿದೆ ಎಂದು ಬಿಜೆಪಿ (BJP) ಆರೋಪಿಸಿದೆ.

ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ಸರ್ಕಾರದ ತುಷ್ಠೀಕರಣದ ನೀತಿಯಿಂದಾಗಿಯೇ ನಾಗಮಂಗಲದಲ್ಲಿ ಗಲಭೆಯಾಗಿದೆ ಎಂದು ಬಿಜೆಪಿಯ ಸತ್ಯಶೋಧನಾ ಸಮಿತಿ ವರದಿ ನೀಡಿದೆ.
ಈ ಗಲಭೆ ಪೂರ್ವನಿಯೋಜಿತವಾಗಿದ್ದು, ಹಿಂದೂ ಸಮುದಾಯದ ಅಂಗಡಿಗಳಿಗೆ ಮಾತ್ರ ಬೆಂಕಿ ಹಚ್ಚಲಾಗಿದೆ. ಕಳೆದ ವರ್ಷವೂ ಇದೇ ರೀತಿ ಗಲಭೆ ನಡೆದಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿ, ಗಣೇಶ ಮೂರ್ತಿಯ ವಿಸರ್ಜನೆಗೆ ವಿಘ್ನ ತರಲು ಮುಂದೆ ನಿಂತು ಸಹಕಾರ ನೀಡಿದೆ. ಹಿಂದೂ ಸಮುದಾಯ ಅಭದ್ರವಾಗಿದ್ದಷ್ಟೂ ತನಗೆ ಲಾಭ ಎಂದು ಅರಿತುಕೊಂಡಿರುವ ಕಾಂಗ್ರೆಸ್ ಸರ್ಕಾರ ಪದೇ ಪದೇ ಹಿಂದೂ ಸಮುದಾಯವನ್ನು ಅವಮಾನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

https://twitter.com/BJP4Karnataka/status/1837379965106409835

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read