ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ: ಎರಡು ಪೌರ ಸಂಸ್ಥೆಗಳು ಬಿಜೆಪಿಗೆ

ಬೆಂಗಳೂರು: ಹೊಸದಾಗಿ ರಚನೆಯಾದ ಎರಡು ಪಟ್ಟಣ ಪಂಚಾಯಿತಿ, ಒಂದು ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ವಿವಿಧ ಕಾರಣಗಳಿಂದ ತೆರವಾಗಿದ್ದ ನಗರಸಭೆ, ಪುರಸಭೆಯ 35 ವಾರ್ಡ್ ಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಿದೆ.

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣ ಪಂಚಾಯಿತಿ, ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಯಲ್ಲಿ ಬಿಜೆಪಿ ಜಯಭೇರಿ ಗಳಿಸಿದೆ. ಚಡಚಣ ಪಟ್ಟಣ ಪಂಚಾಯಿತಿಯ 16 ಸ್ಥಾನಗಳಲ್ಲಿ ಬಿಜೆಪಿ 8, ಕಾಂಗ್ರೆಸ್ 4, ಪಕ್ಷೇತರರು 4 ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ. ಸೋಮೇಶ್ವರ ಪುರಸಭೆಯ 23 ವಾರ್ಡ್ ಗಳಲ್ಲಿ ಬಿಜೆಪಿ 16, ಕಾಂಗ್ರೆಸ್ 7 ಸ್ಥಾನ ಪಡೆದುಕೊಂಡಿವೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ವಶವಾಗಿದೆ. 16 ಸ್ಥಾನಗಳಲ್ಲಿ ಕಾಂಗ್ರೆಸ್ 14, ಬಿಜೆಪಿ 2 ವಾರ್ಡ್ ಗಳಲ್ಲಿ ಜಯಗಳಿಸಿದೆ.

19 ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ 32 ವಾರ್ಡ್ ಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ 24, ಬಿಜೆಪಿ 5, ಜೆಡಿಎಸ್ 4, ಪಕ್ಷೇತರರು 2 ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read