HomeLatest NewsBREAKING: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ವಿರುದ್ಧ ಬಿಜೆಪಿಯಿಂದಲೂ ಪ್ರತಿಭಟನೆ: BJP ಕಚೇರಿ ಮುಂದೆ ಹೈಡ್ರಾಮಾ!

BREAKING: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ವಿರುದ್ಧ ಬಿಜೆಪಿಯಿಂದಲೂ ಪ್ರತಿಭಟನೆ: BJP ಕಚೇರಿ ಮುಂದೆ ಹೈಡ್ರಾಮಾ!

ಬೆಂಗಳೂರು: ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರಿಗೆ ಬಿಜೆಪಿ ನಾಯಕರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ಬೆಂಗಳೂರಿನ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ನಿಯಂತ್ರುಸಲು ಹರಸಾಹಸಪಟ್ಟಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಒಂದು ರೀತಿ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಹಾಗೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರ ಮನವೊಲಿಕೆಗೆ ಪೊಲೀಸರು ಯತ್ನಿಸಿದ್ದಾರೆ. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಕಾಂಗ್ರೆಸ್ ನ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular