ನವದೆಹಲಿ: ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಪ್ರಧಾನಿಗೆ ಪತ್ರ ಬರೆದು, ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದ್ದಾರೆ.
ಅವರು ರಾಷ್ಟ್ರೀಯ ಸಮಸ್ಯೆಗಳನ್ನು ಪರಿಹರಿಸುವ ಅಗತ್ಯವನ್ನು ಒತ್ತಿ ಹೇಳಿದ್ದು, ತಕ್ಷಣ ಸಂಸತ್ತಿನ ಚರ್ಚೆಗೆ ಕರೆ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿದೆ. ಪಹಲ್ಗಾಮ್ ದಾಳಿಯ ನಂತರ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ಪ್ರಧಾನಿ ಮೋದಿ ತಮ್ಮ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ಕರೆದು ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯ ಮೊದಲಿಗಿಂತ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.