HomeKarnatakaಕಾಂಗ್ರೆಸ್ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ನಾಳೆ ದೆಹಲಿಯಲ್ಲಿ ಸಿಇಸಿ ಸಭೆ

ಕಾಂಗ್ರೆಸ್ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ನಾಳೆ ದೆಹಲಿಯಲ್ಲಿ ಸಿಇಸಿ ಸಭೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ 124 ಅಭ್ಯರ್ಥಿಗಳ ಪಟ್ಟಿಯನ್ನು ಸಲೀಸಾಗಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ 100 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದೆ.

ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಸಂಬಂಧ ಏಪ್ರಿಲ್ 4ರ ಮಂಗಳವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಹೀಗಾಗಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಕ್ರೀನಿಂಗ್ ಸಮಿತಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದಲ್ಲಿ 100 ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಎಐಸಿಸಿಗೆ ಸಲ್ಲಿಸಲಾಗಿದೆ. ನಾಳೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳನ್ನು ಫೈನಲ್ ಮಾಡಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular