HomeKarnataka100 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಎರಡನೇ ಪಟ್ಟಿ ಬಿಡುಗಡೆ ಬಗ್ಗೆ ಇಂದು ಮಹತ್ವದ ಸಭೆ

100 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಎರಡನೇ ಪಟ್ಟಿ ಬಿಡುಗಡೆ ಬಗ್ಗೆ ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಇಂದು ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಳಿಸಲು ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

ದೊಡ್ಡಬಳ್ಳಾಪುರದ ಖಾಸಗಿ ರೆಸಾರ್ಟ್ ನಲ್ಲಿ ನಡೆಯಲಿರುವ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಜಿ. ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಹೆಚ್ಚಿನ ಪೈಪೋಟಿ ಇಲ್ಲದ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗಿದೆ. 100 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಇಂದು ಮಹತ್ವದ ಸಭೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿರುವ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಆಕಾಂಕ್ಷಿಗಳ ಮನವೊಲಿಸಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ನಿಟ್ಟಿನಲ್ಲಿ ನಾಯಕರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಎರಡನೇ ಪಟ್ಟಿ ಪ್ರಕಟ ವಿಳಂಬವಾದರೆ ಆಕಾಂಕ್ಷಿಗಳ ನಡುವೆ ಪೈಪೋಟಿ ಹೆಚ್ಚಾಗಿ ಚುನಾವಣೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಎರಡನೇ ಪಟ್ಟಿಯನ್ನು ಕೂಡ ಶೀಘ್ರವೇ ಬಿಡುಗಡೆ ಮಾಡಲು ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular