ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು, ನಾಳೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥ್ ಮಲ್ಲಿಕಾರ್ಜುನ ಮತ್ತು ಬಾಗಲಕೋಟೆ ಕ್ಷೇತ್ರಕ್ಕೆ ಉಮೇಶ್ ಮೇಟಿ ಅವರಿಗೆ ಬಿ ಫಾರಂ ನೀಡಲಾಗಿದೆ. ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ಸೋಮವಾರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ತೆರಳಲಿರುವ ಸಿಎಂ ಮತ್ತು ಡಿಸಿಎಂ ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿರುವರು.

