ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 2 ಲಕ್ಷ ಸರ್ಕಾರಿ ಉದ್ಯೋಗ ಭರ್ತಿ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 2 ಲಕ್ಷ ಸರ್ಕಾರಿ ಉದ್ಯೋಗ ಭರ್ತಿ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ನಡೆಸಿದ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ಮತದಾರರಿಗೆ ಈ ಭರವಸೆ ನೀಡಿದರು.

ಖಾಲಿ ಇರುವ ಶಿಕ್ಷಕರು, ಉಪನ್ಯಾಸಕರು ಹುದ್ದೆ ಸೇರಿ ಎಲ್ಲಾ ಹುದ್ದೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಭರ್ತಿ ಮಾಡಲಾಗುತ್ತದೆ . ನಮ್ಮ ರಾಜ್ಯದ ಜನರು ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದು ಹೊಸ ಅಭಿವೃದ್ದಿಗೆ ಮನ್ನಣೆ ಬರೆದಿದ್ದಾರೆ ಎಂದರು.

ಕರ್ನಾಟಕ ಮಾದರಿಯಲ್ಲೇ ತೆಲಂಗಾಣದಲ್ಲಿ ಕೂಡ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ನಮ್ಮ ಕರ್ನಾಟಕದಲ್ಲಿ ಮಹಿಳಾ ಯಜಮಾನಿಗೆ 2 ಸಾವಿರ ಕೊಡುತ್ತಿದ್ದೇವೆ, ಆದರೆ ಇಲ್ಲಿ 2,500 ಕೊಡುತ್ತೇವೆ ಎಂದು ಘೋಷಿಸಿದರು.

ತೆಲಂಗಾಣದಲ್ಲಿ ತನ್ನ ಯಶಸ್ಸನ್ನು ಅನುಕರಿಸಲು ಕಾಂಗ್ರೆಸ್ ಕರ್ನಾಟಕದಿಂದ ತನ್ನ ಸಂಪೂರ್ಣ ಶಕ್ತಿಯನ್ನು ಬಳಸುತ್ತಿರುವಂತೆ ತೋರುತ್ತಿದೆ, ಪಕ್ಷವು ರಾಜ್ಯದಿಂದ 10 ಸಚಿವರು ಮತ್ತು 48 ಹಿರಿಯ ನಾಯಕರನ್ನು ಚುನಾವಣಾ ನಿರ್ವಹಣೆಗಾಗಿ ನೆರೆಯ ರಾಜ್ಯಕ್ಕೆ ಕಳುಹಿಸಿದೆ.

ಕರ್ನಾಟಕದಿಂದ 10 ಸಚಿವರನ್ನು ಎಐಸಿಸಿ ಕ್ಲಸ್ಟರ್ ಉಸ್ತುವಾರಿಗಳಾಗಿ ನೇಮಿಸಲಾಗಿದ್ದು, ಪಕ್ಷದ ಇತರ 48 ನಾಯಕರನ್ನು – ಹೆಚ್ಚಾಗಿ ಶಾಸಕರು ಮತ್ತು ಎಂಎಲ್ಸಿಗಳನ್ನು – ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದ ವಿವಿಧ ಜಿಲ್ಲೆಗಳಿಗೆ ಎಐಸಿಸಿ ವಿಧಾನಸಭಾ ಕ್ಷೇತ್ರ ವೀಕ್ಷಕರಾಗಿ ನೇಮಿಸಲಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಮುಂಚೂಣಿಯಲ್ಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read