ಬಿಜೆಪಿ -ಜೆಡಿಎಸ್ ಗೆ ಡಿಸಿಎಂ ಡಿಕೆ ಶಾಕ್: ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಕಣಕ್ಕೆ…?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡೆಸಿದ ತಂತ್ರಗಾರಿಕೆ ಯಶಸ್ವಿಯಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿಯುವಂತೆ ಪಕ್ಷದ ಮುಖಂಡರ ಸಲಹೆಯನ್ನು ವಿರೋಧಿಸಿದ ಯೋಗೇಶ್ವರ್ ಬಿಜೆಪಿಯಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಡುವಂತೆ ಒತ್ತಡ ಹಾಕಿದ್ದರು. ಆದರೆ, ಇದಕ್ಕೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನತ್ತ ವಾಲಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್ ಯೋಗೇಶ್ವರ್ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಡಿಸಿಎಂ ಡಿಕೆ ತಂತ್ರಗಾರಿಕೆ ಫಲ ಕೊಟ್ಟಿದೆ. ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಿಜೆಪಿ ನಾಯಕರು ಕೊನೆ ಕ್ಷಣದವರೆಗೂ ನಡೆಸಿದ ಪ್ರಯತ್ನ ವಿಫಲವಾಗಿದೆ. ಮಂಗಳವಾರ ತಡರಾತ್ರಿ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಯೋಗೇಶ್ವರ್ ಕಣಕ್ಕಿಳಿಯುವುದು ಖಚಿತವಾಗಿದೆ. ಈ ನಡುವೆ ಅವರು ಸಮಾಜವಾದಿ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read