HomeIndiaBIG NEWS: ಕಾಂಗ್ರೆಸ್ CWC ಯಲ್ಲಿ ಮಹತ್ವದ ನಿರ್ಣಯ: ಜಾತಿ ಗಣತಿ ನಡೆಸಲು ತೀರ್ಮಾನ

BIG NEWS: ಕಾಂಗ್ರೆಸ್ CWC ಯಲ್ಲಿ ಮಹತ್ವದ ನಿರ್ಣಯ: ಜಾತಿ ಗಣತಿ ನಡೆಸಲು ತೀರ್ಮಾನ

ನವದೆಹಲಿ: ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿ ನಡೆಸಲು ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿಗೆ ಒತ್ತಡ ಹೇರಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ದೇಶಾದ್ಯಂತ ಜಾತಿ ಗಣತಿ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಕೂಡಲೇ ಶೇಕಡ 33 ರಷ್ಟು ಮಹಿಳಾ ಮೀಸಲಾತಿ ಜಾರಿಗೊಳಿಸಲಾಗುವುದು. ಈ ಮೀಸಲಾತಿಯಲ್ಲಿ ಒಬಿಸಿಗೆ ಮೀಸಲಾತಿ ನೀಡುವ ಬಗ್ಗೆಯೂ ನಿರ್ಣಯ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular