HomeIndiaಸಿಎಂ ಶಿವರಾಜ್ ಸಿಂಗ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ‘ಹನುಮಾನ್’

ಸಿಎಂ ಶಿವರಾಜ್ ಸಿಂಗ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ‘ಹನುಮಾನ್’

ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 144 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.

2008 ರ ‘ರಾಮಾಯಣ’ದಲ್ಲಿ ಹನುಮಾನ್ ಪಾತ್ರವನ್ನು ನಿರ್ವಹಿಸಿದ ವಿಕ್ರಮ್ ಮಸ್ತಲ್ ಅವರನ್ನು ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕಣಕ್ಕಿಳಿಸಿದೆ. ಇವರಿಬ್ಬರು ಬುಧ್ನಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ವಿಕ್ರಮ್ ಮಸ್ತಲ್ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದಂತಾಗಿದೆ. ಈ ವರ್ಷ ಜುಲೈನಲ್ಲಿ ಮಸ್ತಲ್ ಕಾಂಗ್ರೆಸ್ ಸೇರಿದ್ದರು. ನಟನ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಉಪಸ್ಥಿತರಿದ್ದರು.

ಸಿಎಂ ಚೌಹಾಣ್ ಬುಧ್ನಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ತನ್ನ ನಾಲ್ಕನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಪ್ರಕಟಿಸಿತ್ತು. ಅಕ್ಟೋಬರ್ 9 ರಂದು ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.

ಬುಧ್ನಿ ವಿಧಾನಸಭಾ ಕ್ಷೇತ್ರವು ಶಿವರಾಜ್ ಚೌಹಾಣ್ ಅವರ ಭದ್ರಕೋಟೆಯಾಗಿದೆ. 2018 ರ ವಿಧಾನಸಭಾ ಚುನಾವಣೆಯಲ್ಲಿ, ಚೌಹಾಣ್ ಬುಧ್ನಿ ಸ್ಥಾನವನ್ನು 58,999 ಮತಗಳ ಅಂತರದಿಂದ ಗೆದ್ದರು, ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಅರುಣ್ ಯಾದವ್ ಅವರನ್ನು ಸೋಲಿಸಿದರು.

ಮಧ್ಯಪ್ರದೇಶದ ಕಾಂಗ್ರೆಸ್‌ನ ಇತರ ಅಭ್ಯರ್ಥಿಗಳ ಪೈಕಿ ರಾಜ್ಯ ಪಕ್ಷದ ಮುಖ್ಯಸ್ಥ ಕಮಲ್‌ನಾಥ್‌ ಅವರು ಛಿಂದ್‌ವಾರಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್‌ ಅವರ ಪುತ್ರ ಜೈವರ್ಧನ್‌ ಸಿಂಗ್‌ ರಘೋಘರ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಪ್ರಸ್ತುತ ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular