HomeKarnatakaಬಳ್ಳಾರಿ ಪರಿಸ್ಥಿತಿ ಅವಲೋಕಿಸಿ ವರದಿ ನೀಡಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚನೆ

ಬಳ್ಳಾರಿ ಪರಿಸ್ಥಿತಿ ಅವಲೋಕಿಸಿ ವರದಿ ನೀಡಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚನೆ

ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಘರ್ಷಣೆ ಮತ್ತು ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಿ ವರದಿ ನೀಡಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಿದೆ.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಬಳ್ಳಾರಿ ಘರ್ಷಣೆಯ ಬಗ್ಗೆ ಸತ್ಯಶೋಧನಾ ಸಮಿತಿ ರಚಿಸಿದ್ದು, ಸ್ಥಳಕ್ಕೆ ತೆರಳಿ ವಾಸ್ತವ ಸ್ಥಿತಿಯ ಬಗ್ಗೆ ನಿಯೋಗ ವರದಿ ನೀಡಲಿದೆ. ನಿಯೋಗದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಸಂಸದ ಜಿ. ಕುಮಾರನಾಯಕ್, ಶಾಸಕ ಟಿ. ರಘುಮೂರ್ತಿ, ವಿಧಾನಪರಿಷತ್ ಸದಸ್ಯರಾದ ಜಕ್ಕಪ್ಪನವರ್ ಮತ್ತು ಬಸನಗೌಡ ಬಾದರ್ಲಿ ಅವರು ನಿಯೋಗದಲ್ಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular