HomeLatest NewsBIG NEWS: ಎರಡು ವರ್ಷ ಪೂರ್ಣಗೊಳಿಸಿದ ಕಾಂಗ್ರೆಸ್ ಸರ್ಕಾರ: ಇಂದಿನಿಂದ ಸಾಧನೆ ಸಮಾವೇಶ

BIG NEWS: ಎರಡು ವರ್ಷ ಪೂರ್ಣಗೊಳಿಸಿದ ಕಾಂಗ್ರೆಸ್ ಸರ್ಕಾರ: ಇಂದಿನಿಂದ ಸಾಧನೆ ಸಮಾವೇಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಸಾಧನೆ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಪ್ರತಿ ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ಕಾರ್ಯ ಚಟುವಟಿಕೆಗಳ ವಿವರಗಳನ್ನು ಜನರಿಗೆ ತಲುಪಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಇಂದಿನಿಂದಲೇ ಜಾರಿಗೆ ಬರಲಿದೆ. ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದೆ. ಇದರ ವಿರುದ್ಧ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದ್ದು, ಸರ್ಕಾರದ ಎರಡನೇ ವರ್ಷಾಚರಣೆಯ ಸಮಾವೇಶಗಳನ್ನು ನಡೆಸಲು ಮುಂದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೈರದೇವನಹಳ್ಳಿ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿ ಇಂದು ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ, ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ.ಹೆಚ್. ಮುನಿಯಪ್ಪ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular