HomeKarnatakaBIG NEWS : ತುಮಕೂರಿನಲ್ಲಿ ನಾಳೆ ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ ; ...

BIG NEWS : ತುಮಕೂರಿನಲ್ಲಿ ನಾಳೆ ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ ; 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬೆಂಗಳೂರು : ತುಮಕೂರಿನಲ್ಲಿ ನಾಳೆ (ಮೇ 19) ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಇದೇ ಸಮಾವೇಶದಲ್ಲಿ ಸರ್ಕಾರದಿಂದ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಗೃಹಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಈ ಸರ್ಕಾರದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, “ಸರ್ಕಾರ ಬಂದು ಮೂರು ವರ್ಷಗಳಾಗಿವೆ. ನಾವು ಜನರಿಗೆ ಅನೇಕ ಭರವಸೆಗಳನ್ನು ನೀಡಿದ್ದೆವು. ಈ ಮೂರು ವರ್ಷ ಅವಧಿಯಲ್ಲಿ ನಾವು ಏನೇನನ್ನು ಈಡೇರಿಸಿದ್ದೇವೆ ಎಂಬುದನ್ನು ಈ ಸಮಾವೇಶದ ಮೂಲಕ ಜನರಿಗೆ ತಿಳಿಸಲಿದ್ದೇವೆ” ಎಂದರು.

ಶಕ್ತಿ ಪ್ರದರ್ಶನದ ಚರ್ಚೆಗೆ ಸ್ಪಷ್ಟನೆ: ಈ ಸಮಾವೇಶವು ಪರಮೇಶ್ವರ್ ಅವರ ‘ಶಕ್ತಿ ಪ್ರದರ್ಶನ’ ಎಂಬ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಅವರು, “ಇಲ್ಲಿ ಯಾರ ಶಕ್ತಿ ಪ್ರದರ್ಶನವೂ ಇಲ್ಲ. ಇದು ಸರ್ಕಾರದ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ಬಗ್ಗೆ ಮಾಡುತ್ತಿರುವ ಸಮಾವೇಶವಷ್ಟೇ. ವೈಯಕ್ತಿಕವಾಗಿ ನಾನಾಗಲಿ ಅಥವಾ ಬೇರೆಯವರಾಗಲಿ ಇದನ್ನು ಆ ರೀತಿ ನೋಡುವುದಿಲ್ಲ. ನಾವು ‘ನುಡಿದಂತೆ ನಡೆದಿದ್ದೇವೆ’ ಎಂದು ಜನರಿಗೆ ಹೇಳಲು ಹೊರಟಿದ್ದೇವೆ. ಇದು ಸರ್ಕಾರದ ಕಾರ್ಯಕ್ರಮವಾಗಿದ್ದು, ಪಕ್ಷದ ಕಾರ್ಯಕ್ರಮ ಅಲ್ಲದ ಕಾರಣ ಹೈಕಮಾಂಡ್ ನಾಯಕರನ್ನು ಕರೆದಿಲ್ಲ” ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದಲ್ಲಿ ಬದಲಾವಣೆ ಕುರಿತು ಪ್ರತಿಕ್ರಿಯೆ: ಸಮಾವೇಶದ ಬಳಿಕ ಸರ್ಕಾರದಲ್ಲಿ ಬದಲಾವಣೆ ಆಗಲಿದೆಯೇ ಎಂಬ ಪ್ರಶ್ನೆಗೆ, “ಬದಲಾವಣೆ ಎಂಬುದು ಬೇರೆ ವಿಚಾರ. ನಾವಿಲ್ಲಿ ಅಭಿವೃದ್ಧಿಯ ದೃಷ್ಟಿಯಿಂದ ಸಮಾವೇಶ ಮಾಡುತ್ತಿದ್ದೇವೆ. ಅದೆಲ್ಲ ಪಕ್ಷದ ಆಂತರಿಕ ವಿಚಾರವಾಗಿದ್ದು, ಅದನ್ನು ಇದರ ಜೊತೆ ಬೆರೆಸಲು ಹೋಗುವುದಿಲ್ಲ” ಎಂದು ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular