BIG BREAKING: ಸರ್ಕಾರ ಅಲುಗಾಡುವ ಸೂಚನೆ ಕೊಟ್ರಾ ಪರಮೇಶ್ವರ್…? ಸಿಎಂ ತವರಲ್ಲಿ ಶಾಕಿಂಗ್ ಹೇಳಿಕೆ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ತವರಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಶಾಕಿಂಗ್ ಹೇಳಿಕೆ ನೀಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಅಲುಗಾಡುತ್ತಿರುವ ಸೂಚನೆ ಕೊಟ್ಟಂತಿದೆ.

ಮೈಸೂರಿನಲ್ಲಿ ಮಾತನಾಡಿದ ಪರಮೇಶ್ವರ್, ಮುಂದೆ ಏನಾಗುತ್ತೋ ಗೊತ್ತಿಲ್ಲ, ಬೇಗನೆ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಿಬಿಡಿ ಎಂದು ಹೇಳಿದ್ದಾರೆ.

ಆದಷ್ಟು ಬೇಗನೆ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಿ. ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದ್ರೆ ಏನನ್ನೂ ಹೇಳಲಾಗುವುದಿಲ್ಲ ಎಂದು. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ ಪರಮೇಶ್ವರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಕಚೇರಿ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಕಾಂಗ್ರೆಸ್ ಕಚೇರಿಗೆ ಸ್ಥಳ ಪಡೆಯಲು ಸಾಕಷ್ಟು ಹೋರಾಟ ಮಾಡಿದ್ದೇನೆ. ಚಂದ್ರಪ್ರಭ ಅರಸು ಜೊತೆಗೆ ನಾನು ಸಾಕಷ್ಟು ಬಾರಿ ಸಭೆ ನಡೆಸಿದ್ದೇನೆ. ಶೀಘ್ರದಲ್ಲಿಯೇ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಿಸಲು ಸಿಎಂ ಹೊರಟಿದ್ದಾರೆ. 15 ಕೋಟಿ ರೂ. ವೆಚ್ಚದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸಿಎಂ ಮುಂದಾಗಿದ್ದಾರೆ. ಆದಷ್ಟು ಬೇಗನೆ ಕಾಂಗ್ರೆಸ್ ಕಚೇರಿ ಕಟ್ಟಿ ಬಿಡಿ. ಮುಂದೇನಾಗುತ್ತೋ ಗೊತ್ತಿಲ್ಲ. ಇವತ್ತಿನ ರಾಜಕೀಯ ಬೆಳವಣಿಗೆ ಗಮನಿಸಿದರೆ ಏನೂ ಹೇಳಲು ಆಗುವುದಿಲ್ಲ. ನಮ್ಮ ಸರ್ಕಾರ ಇರುವಾಗಲೇ ಕಚೇರಿ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read