HomeKarnatakaಲೋಕಸಭೆ ಚುನಾವಣೆ ನಂತರ ಸಿಎಂ ಬದಲಾವಣೆ ಊಹಾಪೋಹ, 5 ವರ್ಷ ಸಿದ್ದರಾಮಯ್ಯರೇ ಮುಖ್ಯಮಂತ್ರಿ: ಯತೀಂದ್ರ

ಲೋಕಸಭೆ ಚುನಾವಣೆ ನಂತರ ಸಿಎಂ ಬದಲಾವಣೆ ಊಹಾಪೋಹ, 5 ವರ್ಷ ಸಿದ್ದರಾಮಯ್ಯರೇ ಮುಖ್ಯಮಂತ್ರಿ: ಯತೀಂದ್ರ

ಹಾಸನ: ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುದ್ದಿ ಕೇವಲ ಊಹಾಪೋಹವಷ್ಟೇ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ‌.

ಹಾಸನ ಜಿಲ್ಲೆ ಹೊಳೆನರಸಿಪುರ ತಾಲೂಕಿನ ಹಳ್ಳಿಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ 5 ವರ್ಷ ಅವಧಿ ಪೂರ್ಣಗೊಳಿಸಲಿದ್ದು, ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸಿಎಂ ಆಗಲಿದ್ದಾರೆ ಎಂದು ಕೆಲವು ಶಾಸಕರು ಹೇಳುತ್ತಾರೆ. ಇಂತಹ ಗೊಂದಲಗಳು ಸಹಜ. ಐದು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎನ್ನುವ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ನಾನು ಆಕಾಂಕ್ಷಿಯಲ್ಲ. ಪಕ್ಷದ ವರಿಷ್ಠರು ಇನ್ನೂ ತೀರ್ಮಾನಿಸಿಲ್ಲ, ಅವರು ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧವಾಗಿರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular