ಸ್ವಪಕ್ಷದವರಿಂದಲೇ ಕಾಂಗ್ರೆಸ್ ಸರ್ಕಾರ ಪತನ: ಯತ್ನಾಳ್ ಬಾಂಬ್

ಹುಬ್ಬಳ್ಳಿ: ಸ್ವಪಕ್ಷದವರಿಂದಲೇ ಜನವರಿ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ಸರ್ಕಾರವನ್ನು ಪತನಗೊಳಿಸಲಿದ್ದಾರೆ. ಹೀಗಾಗಿ ನಾವೇ ನೇರವಾಗಿ ಮುಖ್ಯಮಂತ್ರಿಗಳಾಗಬಹುದೆಂದು ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಲ್ಲ. ನಮ್ಮ ಪಕ್ಷದವರೇ ಏಕೆ ಮುಖ್ಯಮಂತ್ರಿ ಆಗಬಾರದು ಎಂದು ಪ್ರಶ್ನಿಸಿದ್ದಾರೆ.

ವೇಟಿಂಗ್ ಸಿಎಂ ಕುಮ್ಮಕ್ಕಿನಿಂದಾಗಿ ಬಿ.ಕೆ. ಹರಿಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದಾರೆ. ಹರಿಪ್ರಸಾದ್ ಅವರನ್ನು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read