‘ಗ್ಯಾರಂಟಿ ಯೋಜನೆ’ಗಳಿಗೆ ಅರ್ಜಿ ಹಾಕಲು ಹಣ ವಸೂಲಿ ಮಾಡಿದ್ರೆ ಸೂಕ್ತ ಕ್ರಮ : ಡಿಸಿಎಂ ಡಿಕೆಶಿ ಎಚ್ಚರಿಕೆ

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಹಾಕಲು ಹಣ ವಸೂಲಿ ಮಾಡಿದ್ರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ‘ ಗ್ಯಾರಂಟಿ ಯೋಜನೆಗಳಿಗೆ ಸಲ್ಲಿಸಲು ಬರುತ್ತಿರುವ ಜನರಿಂದ ಮನಬಂದಂತೆ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಹಾಕಲು ಹಣ ವಸೂಲಿ ಮಾಡಿದ್ರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ’ ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಯಾರಾದರೂ ಸಂಘ ಸಂಸ್ಥೆಗಳು ಹಣ ವಸೂಲಿ ಮಾಡಿದ್ರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಈಗಾಗಲೇ 200 ರಿಂದ 500 ರೂಪಾಯಿ ಹಣ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಇದೆ. ಅದು ಗೊತ್ತಾದ್ರೆ ಅವರ ಏಜೆನ್ಸಿ ಕೂಡ ಕ್ಯಾನ್ಸಲ್ ಮಾಡ್ತೀವಿ. ಯೋಜನೆ ಪಡೆದುಕೊಳ್ಳಲು ಯಾರಾದರೂ ಲಂಚ ಕೇಳಿದರೆ ನಾವು ಒಂದು ಸಹಾಯವಾಣಿ ನಂಬರ್ ಕೊಡ್ತೀವಿ , ಅದಕ್ಕೆ ಕರೆ ಮಾಡಿ ಎಂದರು.

ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

ಮೈಸೂರು : ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮತದಾರರಿಗೆ 5 ‘ಗ್ಯಾರಂಟಿ’ ಯೋಜನೆಗಳನ್ನು ಘೋಷಣೆಗಳನ್ನು ಮಾಡಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಒಂದೊಂದೇ ಯೋಜನೆಗಳ ಜಾರಿಗೆ ಕ್ರಮ ಕೈಗೊಳ್ಳುತ್ತಿದೆ.ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಕೊಡುವ ‘ಶಕ್ತಿ’ ಯೋಜನೆ ಈಗಾಗಲೇ ಅನುಷ್ಠಾನಗೊಂಡಿದ್ದು, ಪ್ರತಿನಿತ್ಯ ಲಕ್ಷಾಂತರ ಮಂದಿ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.
ಇದೀಗ ಮತ್ತೊಂದು ಪ್ರಮುಖ ಯೋಜನೆ ‘ಗೃಹಲಕ್ಷ್ಮಿ’ ಅನುಷ್ಠಾನಕ್ಕೆ ಸಿದ್ಧತೆಗಳ ನಡೆಯುತ್ತಿದ್ದು, ಇದು ಆಗಸ್ಟ್ ತಿಂಗಳಿನಿಂದ ಜಾರಿಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read