Congress Guarantee : ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ಮಾಜಿ ಸಿಎಂ ‘BSY’ ನೇತೃತ್ವದಲ್ಲಿ ಪ್ರತಿಭಟನೆ ಆರಂಭ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಜಾರಿಗೆ ಆಗ್ರಹಿಸಿ  ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ  ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಆರಂಭವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಡಿವಿ ಸದಾನಂದಗೌಡ, ಮಾಜಿ ಸಚಿವ ಬಿಸಿ ನಾಗೇ‍ಶ್, ಎನ್ ಮಹೇಶ್, ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವರು ಹಾಜರಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಬಿಎಸ್ ಯಡಿಯೂರಪ್ಪ ಕೂಡ ಆಗಮಿಸಿದ್ದಾರೆ.

ಇನ್ನೊಂದೆಡೆ ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ತೀವ್ರ ಗದ್ದಲ ಕೋಲಾಹಲ ಆರಂಭಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಿದ ಘಟನೆ ನಡೆದಿದೆ.ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಗ್ಯಾರಂಟಿ ಯೋಜನೆಗಳ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಗದ್ದಲ-ಕೋಲಾಹಲ ಆರಂಭವಾಗುತ್ತಿದ್ದಂತೆ ಸ್ಪೀಕರ್ ಖಾದರ್, ವಿಧಾನಸಭೆ ಕಲಾಪವನ್ನು 15 ನಿಮಿಷ ಮುಂದೂಡಿದರು.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read