HomeKarnatakaCongress Guarantee : ‘ಗ್ಯಾರಂಟಿ ಯೋಜನೆ’ ಗಳ ಅನುಷ್ಟಾನಕ್ಕೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ

Congress Guarantee : ‘ಗ್ಯಾರಂಟಿ ಯೋಜನೆ’ ಗಳ ಅನುಷ್ಟಾನಕ್ಕೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ

ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮಹತ್ವದ ಬೆಳವಣಿಗೆಯಲ್ಲಿ ಗ್ಯಾರಂಟಿ ಯೋಜನೆ’ ಗಳ ಅನುಷ್ಟಾನಕ್ಕೆ ಸಮಿತಿ ರಚನೆ ಮಾಡಿದೆ.

ರಾಜ್ಯ, ಜಿಲ್ಲಾ ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿ ರಚನೆ ಮಾಡಲಾಗಿದೆ.KPCC ಕಚೇರಿಯಲ್ಲಿ ಇಂದು ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಮಿತಿ ರಚನೆ ಬಗ್ಗೆ ಘೋಷಣೆ ಮಾಡಿದ್ದಾರೆ.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು.
ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ. ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು.ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular