ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಸೇರಿ ಗ್ಯಾರಂಟಿ ಸ್ಕೀಂ ಜಾರಿಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ ಕುರಿತಾಗಿ ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಸಭೆ ನಡೆಸಲಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. 5 ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಆರ್ಥಿಕ ಇತಿಮಿತಿಯ ನಡುವೆ ಗ್ಯಾರಂಟಿ ಯೋಜನೆಗಳ ಜಾರಿಗೊಳಿಸಬೇಕಿದೆ.

ಈಗಾಗಲೇ ಇಲಾಖೆಗಳ ಸಚಿವರು ಚರ್ಚೆ ನಡೆಸಿದ್ದು, ಮಹಿಳೆಯರಿಗೆ ಷರತ್ತುಗಳಿಲ್ಲದೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ಇಂದು ಗ್ಯಾರಂಟಿ ಯೋಜನೆಗಳ ಜಾರಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಲಾಗುತ್ತದೆ. ಸರ್ಕಾರದ ಗೊತ್ತು ಗುರಿ ಕುರಿತಾಗಿ ಚರ್ಚೆ ನಡೆಸಲಾಗುವುದು. ಕಿರಿಯ ಸಚಿವರಿಗೆ ಸಿಎಂ ಮಾರ್ಗದರ್ಶನ ನೀಡಿ ಮಾಡಲಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಈಗಾಗಲೇ ಸಿಎಂ ಹಲವು ಸುತ್ತಿನ ಸಭೆ ನಡೆಸಿದ್ದು, ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಿದ್ದಪಡಿಸಿದ ರೂಪುರೇಷೆ ಬಗ್ಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಈಗಾಗಲೇ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸಭೆಗೆ ಬರಲು ಸಂಬಂಧಿಸಿದ ಸಚಿವರಿಗೆ ಸೂಚನೆ ನೀಡಲಾಗಿದೆ. ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ, ಇಂಧನ ಸಚಿವ ಕೆ.ಜೆ. ಜಾರ್ಜ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ನೂತನ ಸಚಿವರೊಂದಿಗೆ ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಸಿಎಂ ಸಮಾಲೋಚನೆ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read