HomeKarnatakaಎಷ್ಟು ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ; ಪರಮೇಶ್ವರ

ಎಷ್ಟು ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ; ಪರಮೇಶ್ವರ

“ನಮ್ಮ‌ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ವಿಶ್ವದ ಅನೇಕ ಅರ್ಥಿಕ ತಜ್ಞರು ಕೊಂಡಾಡುತ್ತಿದ್ದಾರೆ. ಎಷ್ಟೇ ಟೀಕೆ ಟಿಪ್ಪಣಿಗಳು ಬಂದರು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಭರವಸೆ ನೀಡಿದರು.

ಶುಕ್ರವಾರ ತುಮಕೂರು ನಗರದ ಅಮಾನಿಕೆರೆ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

“ಕರ್ನಾಟಕದಲ್ಲಿ ಬಡತನ ನಿರ್ಮೂಲನೆಯಾಗಬೇಕು. ಜನ ಸಮುದಾಯ ಶಾಂತಿ, ನೆಮ್ಮದಿಯಿಂದ ಜೀವನ ನಡೆಸಬೇಕು. ಹಳ್ಳಿಗಾಡಿನ ಯುವಕರು ಹೆಚ್ಚು ವಿದ್ಯಾವಂತರಾಗಿ, ದೇಶವನ್ನು ಕಟ್ಟುವಂತಾಗಬೇಕು” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಯಾವುದೇ ರೀತಿಯ ಟೀಕೆಗಳಿಗೆ ಜಗ್ಗದೆ ಕೆಲಸ ಮಾಡುತ್ತಿದೆ. ರಾಜ್ಯದ ಜನರನ್ನು ಅಭಿವೃದ್ಧಿಯ ಕಡೆ ತೆಗೆದುಕೊಂಡು ಹೋಗುವುದೇ ಸರ್ಕಾರದ ಜವಾಬ್ದಾರಿ” ಎಂದು ತಿಳಿಸಿದರು.

“ಗ್ಯಾರಂಟಿ ಯೋಜನೆಗಳ ಜೊತೆಗೆ 2.50 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಶೀಘ್ರ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಯುವಕರ ಪರವಾಗಿ ಯೋಜನೆಗಳನ್ನು ಕೊಟ್ಟಿದ್ದೇವೆ. ಉದ್ಯೋಗವನ್ನು ಕೊಡುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಈ ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮುಂತಾದವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular