HomeLatest Newsನಾಯಕತ್ವ ಬದಲಾವಣೆ ವಿಚಾರದಲ್ಲಿ ರಿಸ್ಕ್ ತೆಗೆದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಹಿಂದೇಟು

ನಾಯಕತ್ವ ಬದಲಾವಣೆ ವಿಚಾರದಲ್ಲಿ ರಿಸ್ಕ್ ತೆಗೆದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಹಿಂದೇಟು

ಬೆಂಗಳೂರು: ಮುಂದಿನ ಜನವರಿ 6ಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆಯಲ್ಲಿ ಡಿಕೆ ಶಿವಕುಮಾರ್ ಬಣ ಇದೆ. ಆದರೆ ಕಾಂಗ್ರೆಸ್ ಹೈಕಮಾಂಡ್ ನಡೆ ಮಾತ್ರ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರವಾಗಿ ರಿಸ್ಕ್ ತೆಗೆದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಹಿಂದೇಟು ಹಾಕುತ್ತಿದೆ.

ನಾಯಕತ್ವ ವಿಚಾರವಾಗಿ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಲು ಹೈಕಮಾಂಡ್ ಹಿಂದು ಮುಂದು ನೋಡುತ್ತಿದೆ. ಬದಲಾವಣೆಗೆ ಕೈ ಹಾಕಿದರೆ ಪಕ್ಷಕ್ಕೆ ಲಾಭಕ್ಕಿಂತಲೂ ನಷ್ಟವೇ ಹೆಚ್ಚು ಎಂಬ ವರದಿ ಹಿನ್ನೆಲೆಯಲ್ಲಿ ಹೈಕಮಾಂಡ್ ತಟಸ್ಥರಾಗಿದೆ ಎಂಬುವುದು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿರುವ ಮಾಹಿತಿಯಾಗಿದೆ.

ಸೆಪ್ಟಂಬರ್ ಕ್ರಾಂತಿ, ನವೆಂಬರ್ ಕ್ರಾಂತಿಯ ಬಳಿಕ ಇದೀಗ ನಾಯಕತ್ವ ಬದಲಾವಣೆ ಜವರಿಗೆ ತಲುಪಿದೆ. ಆದರೆ ಅಂತಹ ಬದಲಾವಣೆಗೆ ಹೈಕಮಾಂಡ್ ಕೈಹಾಕುವ ಸೂಚನೆ, ಸುಳಿವು ಕಾಣಿಸುತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾತುಗಳೇ ಇದನ್ನು ಸಾಬೀತುಪಡಿಸುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯಕ್ಕೆ ಯಾವುದೇ ಬದಲಾವಣೆಗೆ ಕೈ ಹಾಕುವುದು ಬೇಡವೆಂಬ ತೀರ್ಮಾನಕ್ಕೆ ಹೈಕಮಾಂಡ್ ಬಂದಿದೆ. ಹೈಕಮಾಂಡ್ ನಿಂದ ಯಾವುದೇ ಗೊಂದಲ ಸೃಷ್ಟಿಯಾಗಿಲ್ಲ ಎಂದು ಸ್ವತಃ ದೆಹಲಿ ನಾಯಕರೇ ಹೇಳುತ್ತಿದ್ದಾರೆ. ಅಲ್ಲದೆ, ಗೊಂದಲವನ್ನು ರಾಜ್ಯ ನಾಯಕರೇ ಬಗೆಹರಿಸಿಕೊಳ್ಳುವಂತೆ ಹೈಕಮಾಂಡ್ ಸಲಹೆಯನ್ನು ನೀಡಿದೆ.

ರಾಹುಲ್ ತಟಸ್ಥ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉಭಯ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೂ ಖರ್ಗೆ ಸಮಾಲೋಚನೆ ನಡೆಸಿದ್ದರು.

ಆದರೆ ಇದೀಗ ಖರ್ಗೆ ಕೂಡಾ ಸೈಲೆಂಟಾಗಿದ್ದಾರೆ. ಮತ್ತೊಂದು ಕಡೆಯಲ್ಲಿ ರಾಹುಲ್ ಗಾಂಧಿ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಡಿಸಿಎಂ ಡಿಕೆಶಿ ಭೇಟಿಗೆ ಅವಕಾಶ ನೀಡದೆಯೂ ರಾಹುಲ್ ಗಾಂಧಿ ತಟಸ್ಥರಾಗಿದ್ದಾರೆ.ಸಿಎಂ ಭೇಟಿಗೆ ಅವಕಾಶ ನೀಡಿದರೂ ಡಿಕೆಶಿ ವಿಚಾರವಾಗಿ ರಾಹುಲ್ ಅಂತರ ಕಾಯ್ದುಕೊಂಡಿದ್ದಾರೆ.

ರಾಹುಲ್ ಇದರೊಂದಿಗೆ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲವೆಂಬ ಸಂದೇಶ ರವಾನಿಸಿದ್ದಾರೆ ಎಂಬ ಚರ್ಚೆಗಳು ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಿದೆ. ಪಕ್ಷದ ನೆಲೆ ಗಟ್ಟಿಯಾಗಿರುವ ಕರ್ನಾಟಕದಲ್ಲಿ ಅನಗತ್ಯವಾಗಿ ಗೊಂದಲ ಸೃಷ್ಟಿಸಿಕೊಳ್ಳುವುದು ಬೇಡವೆಂಬ. ಹಾಗಾಗಿ ಸದ್ಯ ಹೇಗಿದೆಯೋ ಹಾಗೆಯೇ ಮುಂದುವರೆಯಲಿ ಎಂಬ ತೀರ್ಮಾನಕ್ಕೆ ಹೈಕಮಾಂಡ್ ಬಂದಂತಿದೆ.

ಡಿಕೆಶಿ ಮಾರ್ಮಿಕ ಹೇಳಿಕೆ

ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಮಾರ್ಮಿಕ ಹೇಳಿಕೆಯೂ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಅಧಿಕಾರ, ಹುದ್ದೆಗಿಂತ ಪಕ್ಷದ ಕಾರ್ಯಕರ್ತನಾಗಿರಲು ನಾನು ಬಯಸುತ್ತೇನೆ. ನನಗೆ ಅದೇ ಶಾಶ್ವತ. 1980ರಿಂದ ನಾನು ಪಕ್ಷದ ಕಾರ್ಯಕರ್ತನಾಗಿದ್ದು, 45 ವರ್ಷಗಳಿಂದ ಇಲ್ಲಿಯವರೆಗೂ ಪಕ್ಷಕ್ಕಾಗಿ ದುಡಿಯುತ್ತಿರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular